ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿನ ಜಮೀನಿನಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

ಭೀಕರ ಹತ್ಯೆಗೀಡಾದ ಸರಳ ವಾಸ್ತುವಿನ ಚಂದ್ರಶೇಖರ ಗುರೂಜಿ ಅವರ ಅಂತ್ಯಕ್ರಿಯೆ ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿನ ಅವರ ಒಡೆತನದ ಜಮೀನಿನಲ್ಲಿ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. 
 

First Published Jul 6, 2022, 9:35 AM IST | Last Updated Jul 6, 2022, 9:54 AM IST

ಹುಬ್ಬಳ್ಳಿ (ಜು. 06):  ಭೀಕರ ಹತ್ಯೆಗೀಡಾದ ಸರಳ ವಾಸ್ತುವಿನ ಚಂದ್ರಶೇಖರ ಗುರೂಜಿ (Chandrashekhar Guruji)  ಅವರ ಅಂತ್ಯಕ್ರಿಯೆ ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿನ ಅವರ ಒಡೆತನದ ಜಮೀನಿನಲ್ಲಿ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಮೊದಲು ಕಿಮ್ಸ್‌ನಲ್ಲಿ (KIMS) ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ. ಮುಂಬೈನಲ್ಲಿರುವ ಅವರ ಪುತ್ರಿ ಹಾಗೂ ಸಂಬಂಧಿಕರಿಗೆ ಇಲ್ಲಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯ ನಡುವಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆಗೆ ಬೇನಾಮಿ ಆಸ್ತಿ ಕಾರಣನಾ?

Video Top Stories