ಕರ್ನಾಟಕಕ್ಕೆ ಡಬಲ್ ಶಾಕ್: 2 ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು..!
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣೆಯಲ್ಲಿ ತಂದೆಯಿಂದ ಮಗನಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ತಂದೆ, ಮಗ ಹಾಗೂ ಮೊಮ್ಮಗ ಸೇರಿ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಂತಾಗಿದೆ. ಇನ್ನು ಬಳ್ಳಾರಿಯ ಕಂಪ್ಲಿಯಲ್ಲಿ ಹೊಸ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರು(ಮೇ.12): ಇಂದು ಬೆಳ್ಳಂಬೆಳಗ್ಗೆ ರಾಜ್ಯಕ್ಕೆ ಡಬಲ್ ಶಾಕ್ ಎದುರಾಗಿದ್ದು, ಎರಡು ಜಿಲ್ಲೆಗಳಲ್ಲಿ 2 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಂದೊಂದು ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣೆಯಲ್ಲಿ ತಂದೆಯಿಂದ ಮಗನಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ತಂದೆ, ಮಗ ಹಾಗೂ ಮೊಮ್ಮಗ ಸೇರಿ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಂತಾಗಿದೆ. ಇನ್ನು ಬಳ್ಳಾರಿಯ ಕಂಪ್ಲಿಯಲ್ಲಿ ಹೊಸ ಪ್ರಕರಣ ಬೆಳಕಿಗೆ ಬಂದಿದೆ.
ನ್ಯಾಯಾಂಗ ಬಂಧಿತರಿಗೆ ಕೋವಿಡ್ 19 ಟೆಸ್ಟ್ ಕಡ್ಡಾಯ
ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದ ವ್ಯಕ್ತಿಗೂ ಕೊರೋನಾ ಸೋಂಕು ತಗುಲಿದೆ. ಇಂದು ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್‌ನಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.