Anti Conversion Bill: ಮತಾಂತರ ನಿಷೇಧಿಸಬೇಕು- ಬೇಡವೆಂದು ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ (Anti-Conversion Bill) ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಕ್ರೈಸ್ತ ನಿಯೋಗ ಸಿಎಂ ಬೊಮ್ಮಾಯಿಯವರನ್ನು (CM Bommai)  ಭೇಟಿ ಮಾಡಿ ಚರ್ಚೆ ನಡೆಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 12): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ (Anti-Conversion Bill) ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಕ್ರೈಸ್ತ ನಿಯೋಗ ಸಿಎಂ ಬೊಮ್ಮಾಯಿಯವರನ್ನು (CM Bommai) ಭೇಟಿ ಮಾಡಿ ಚರ್ಚೆ ನಡೆಸಿದೆ. ಕ್ರೈಸ್ತರ ಸಮಸ್ಯೆ, ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚಿಸಿದ್ದಾರೆ. 

ಮತಾಂತರ ನಿಷೇಧಿಸದಿದ್ರೆ ರಾಜ್ಯವ್ಯಾಪಿ ಹೋರಾಟ ಮಾಡಲಿದ್ದೇವೆ. ಮತಾಂತರ ನಿಷೇಧ ಕಾಯ್ದೆ ತರಲು ಸರ್ಕಾರ ಮೀನಮೇಷ ಎಣಿಸಬಾರದು. ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ತನ್ನಿ' ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

ರಾಜ್ಯ ಸರ್ಕಾರವು ಬೆಳಗಾವಿಯ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡಿಸಲು ಮುಂದಾದರೆ ನಾವು ಸಂಪೂರ್ಣ ವಿರೋಧಿಸುತ್ತೇವೆ. ಈ ವಿಚಾರವನ್ನು ವಿಶ್ವವೇ ಗಮನಿಸುತ್ತಿದ್ದು, ಕರ್ನಾಟಕದಲ್ಲಿ ಈ ರೀತಿ ನಡೆಯುತ್ತಿದೆಯಲ್ಲ ಎಂದು ಜನ ಜಿಗುಪ್ಸೆಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಿಡಿ ಕಾರಿದ್ದಾರೆ.

Related Video