Asianet Suvarna News Asianet Suvarna News

ಡಿಕೆಶಿ ಶಿಲಾನ್ಯಾಸ ನೆರವೇರಿಸಿದ್ದ ಏಸು ಪ್ರತಿಮೆ ವಿವಾದ: ಸಿಎಂ ಭೇಟಿಯಾದ ಕ್ರೈಸ್ತ ನಿಯೋಗ

ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. ಪ್ರಪ್ರಂಚದ ಅತಿ ಎತ್ತರದ ಏಸು ಪ್ರತಿಮೆ ಸ್ಥಾಪನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್‌ ಯಡಿಯೂರಪ್ಪ ಅವರನ್ನು ಕ್ರೈಸ್ತ ಧರ್ಮಗುರುಗಳ ನಿಯೋಗ ಭೇಟಿಯಾಗಿ ಮಾತುಕತೆ ನಡೆಸಿದೆ. 

ಬೆಂಗಳೂರು, [ಜ.05]: ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. 

ರಾಮನಗರ ಯೇಸು ಪ್ರತಿಮೆ ನಿರ್ಮಾಣ ಸ್ಥಗಿತ ಕಾರಣ ಬಹಿರಂಗ

ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರೈಸ್ತ ಧರ್ಮಗುರುಗಳ ನಿಯೋಗ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿಗೆ ನಿವಾಸಕ್ಕೆ ಭೇಟಿ ನೀಡಿ ಸಿಎಂ ಯಡಿಯೂರಪ್ಪ ಜತೆ  ಸುದೀರ್ಘವಾಗಿ ಚರ್ಚೆ ನಡೆಸಿದರು. 

ವಿವಾದಿತ ಕಪಾಲ ಬೆಟ್ಟದಲ್ಲಿ ಸಿಸಿ ಕ್ಯಾಮೆರಾ ಅಳ​ವ​ಡಿ​ಕೆ

Video Top Stories