Asianet Suvarna News Asianet Suvarna News

Bommai @62: ಸಿಎಂರಿಂದ 'ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು' ಕಿರು ಹೊತ್ತಿಗೆ ಬಿಡುಗಡೆ

ತಮ್ಮ ನೇತೃತ್ವದ ಸರ್ಕಾರ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)ಇಂದು ಸರ್ಕಾರದ ಸಾಧನೆಗಳನ್ನು ಒಳಗೊಂಡ ‘ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು’ ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ಬಿಡುಗಡೆಗೊಳಿಸಿದ್ದಾರೆ. 
 

ಬೆಂಗಳೂರು (ಜ. 28): ತಮ್ಮ ನೇತೃತ್ವದ ಸರ್ಕಾರ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)ಇಂದು ಸರ್ಕಾರದ ಸಾಧನೆಗಳನ್ನು ಒಳಗೊಂಡ ‘ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು’ ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ಬಿಡುಗಡೆಗೊಳಿಸಿದ್ದಾರೆ. 

Bommai @62: ಸಿಎಂ ಆಗಿ 6 ತಿಂಗಳು, 62 ನೇ ಹುಟ್ಟುಹಬ್ಬ, ಡಬಲ್ ಸಂಭ್ರಮದಲ್ಲಿ ಬೊಮ್ಮಾಯಿ

 ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆರು ತಿಂಗಳು ಪೂರೈಸುತ್ತಿದ್ದಾರೆ. ಜತೆಗೆ ಅವರ 62ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟುಹಬ್ಬ ಆಚರಿಸಿಕೊಳ್ಳದಿದ್ದರೂ ಸರ್ಕಾರದ ಆರು ತಿಂಗಳ ಸಾಧನೆಯ ಸಂಭ್ರಮವನ್ನು ಸರಳ ಕಾರ್ಯಕ್ರಮದ ಮೂಲಕ ಆಚರಿಸಿಕೊಂಡಿದ್ಧಾರೆ. 

ಜನಪ್ರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರ ನಿರ್ಗಮನದಂಥ ಕ್ಲಿಷ್ಟಕರ ಮತ್ತು ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಬಸವರಾಜ ಬೊಮ್ಮಾಯಿ ಅವರು ತಮ್ಮ ಮೊದಲ ಆರು ತಿಂಗಳ ಅವಧಿಯಲ್ಲೇ ಸ್ಪಷ್ಟಭರವಸೆ ಮೂಡಿಸಿದ್ದಾರೆ.

Video Top Stories