ರಾಜ್ಯದಲ್ಲಿ ಮಳೆಯಾರ್ಭಟ: ಮಳೆ, ಪ್ರವಾಹ ಪೀಡಿತ ಜಿಲ್ಲೆಯ ಡೀಸಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಯಲ್ಲಿನ ಮಳೆಯ ಅಬ್ಬರ ಮುಂದುವರಿದಿದ್ದು, ಮಳೆಯ ಜತೆಗೆ ಬಿರುಗಾಳಿಯೂ ಬೀಸುತ್ತಿದೆ. ಪರಿಣಾಮ ಜನತೆ ಕಂಗಲಾಗಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 08): ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಯಲ್ಲಿನ ಮಳೆಯ ಅಬ್ಬರ ಮುಂದುವರಿದಿದ್ದು, ಮಳೆಯ ಜತೆಗೆ ಬಿರುಗಾಳಿಯೂ ಬೀಸುತ್ತಿದೆ. ಪರಿಣಾಮ ಜನತೆ ಕಂಗಲಾಗಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಸಂಭವಿಸಿದ ಹಾನಿ ಮತ್ತು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆಯುವ ಸಂಬಂಧ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್‌ ಸಿಇಒಗಳ ಜತೆ ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ. 

ಕಂಗಾಲಾಗಿರುವ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ, ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಮನವಿ

ಇಂದು ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಸಂವಾದ ನಡೆಯಲಿದೆ. ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಸಿಇಒಗಳು, ಸಂಬಂಧಪಟ್ಟಸಚಿವರು, ಜಿಲ್ಲಾ ವರಿಷ್ಠಾಧಿಕಾರಿಗಳು ಮತ್ತು ಇತರೆ ಹಿರಿಯ ಅಧಿಕಾರಿಗಳು ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Related Video