ಬೆಂಗಳೂರು ಅರಮನೆ ಮೈದಾನದಲ್ಲಿ 'ಮಣ್ಣು ಉಳಿಸಿ' ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಈಶ ಫೌಂಡೇಶನ್‌ನ ಸದ್ಗುರು ವಾಸುದೇವ್ ಅವರ 'ಮಣ್ಣು ಉಳಿಸಿ' ಅಭಿಯಾನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯುತ್ತಿದೆ. ಬೃಹತ್‌ ಸಾರ್ವಜನಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ, ಅರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 19): ಈಶ ಫೌಂಡೇಶನ್‌ನ ಸದ್ಗುರು ವಾಸುದೇವ್ ಅವರ 'ಮಣ್ಣು ಉಳಿಸಿ' (Save Soil) ಅಭಿಯಾನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ (Palace ground) ನಡೆಯುತ್ತಿದೆ. ಬೃಹತ್‌ ಸಾರ್ವಜನಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ, ಅರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಮಣ್ಣು ಉಳಿಸಿ ಅಭಿಯಾನಕ್ಕೆ ಬೆಂಬಲ ಸೂಚಿಸಿದೆ. 

Save Soil Movement: ಮಣ್ಣು ಉಳಿಸಿ ಅಭಿಯಾನಕ್ಕೆ ಸದ್ಗುರು ಜತೆ ಮಹಾರಾಷ್ಟ್ರ ಒಪ್ಪಂದ

ಅಭಿಯಾನದ ಭಾಗವಾಗಿ ಮಾರ್ಚ್ 21ರಂದು ಯೂರೋಪ್‌ನಿಂದ ಬೈಕ್‌ ಯಾತ್ರೆ ಆರಂಭಿಸಿದ್ದು, ಬೆಂಗಳೂರಿಗೆ ತಲುಪಿ 27298 ಕಿ.ಮೀ ಪೂರ್ಣಗೊಂಡಿದೆ. ಯುರೋಪ್‌, ಮಧ್ಯಏಷ್ಯಾದ 27 ದೇಶಗಳು, ಭಾರತದ 9 ರಾಜ್ಯಗಳಿಗೆ ತೆರಳಿ ಅಲ್ಲಿನ ಸರ್ಕಾರಗಳಿಗೆ ಮಣ್ಣಿನ ಅಧ್ಯಯನದ ವರದಿ ನೀಡಿ, ಮಣ್ಣನ್ನು ಉಳಿಸಲು ಕೈಗೊಳ್ಳಬೇಕಾದ ಕಾರ್ಯನೀತಿಯನ್ನು ನೀಡಲಾಗಿದೆ. ಹಲವು ದೇಶಗಳಿಗೆ ಕಾರ್ಯನೀತಿಯನ್ನು ಆನ್‌ಲೈನ್‌ ಮೂಲಕ ತಲುಪಿಸಲಾಗಿದೆ. ಈವರೆಗೂ 74 ದೇಶಗಳು, ಭಾರತದ 9 ರಾಜ್ಯಗಳು ಮಣ್ಣನ್ನು ಉಳಿಸುವ ಕ್ರಮಗಳನ್ನು ಕೈಗೊಳ್ಳಲು ಒಪ್ಪಿವೆ ಎಂದು ಮಾಹಿತಿ ನೀಡಿದರು.

Related Video