ರೈತರ ಮನೆಗೆ ಪಹಣಿ, ಆದಾಯಪತ್ರ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ರಾಜ್ಯಾದ್ಯಂತ ‘ರೈತರ ಮನೆ ಬಾಗಿಲಿಗೆ ಕಂದಾಯ ದಾಖಲೆ’ ತಲುಪಿಸುವ ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ತಾಲೂಕಿನ ಗುಂರ್ಗೀಲಹಳ್ಳಿ ಗ್ರಾಮದಲ್ಲಿ ಇಂದು ಚಾಲನೆ ನೀಡಿದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 12): ರಾಜ್ಯಾದ್ಯಂತ ‘ರೈತರ ಮನೆ ಬಾಗಿಲಿಗೆ ಕಂದಾಯ ದಾಖಲೆ’ ತಲುಪಿಸುವ ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ತಾಲೂಕಿನ ಗುಂರ್ಗೀಲಹಳ್ಳಿ ಗ್ರಾಮದಲ್ಲಿ ಇಂದು ಚಾಲನೆ ನೀಡಿದರು. 

ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್‌, ಜಾತಿ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ಖುದ್ದು ಕಂದಾಯ ಇಲಾಖೆ ಸಿಬ್ಬಂದಿ ಮೂಲಕ ರೈತರಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ಮುದ್ರಿತಗೊಂಡ ದಾಖಲೆಗಳನ್ನು ಈಗಾಗಲೇ ಈಗಾಗಲೇ ರಾಜ್ಯದ ಎಲ್ಲ ಗ್ರಾಮಪಂಚಾಯ್ತಿ ಕೇಂದ್ರಗಳಿಗೂ ತಲುಪಿಸಲಾಗಿದೆ. ಆಯಾ ಕ್ಷೇತ್ರಗಳಲ್ಲಿ ಸ್ಥಳೀಯ ಶಾಸಕರು, ಚುನಾಯಿತ ಜನಪ್ರತಿನಿಧಿಗಳು ರೈತರಿಗೆ ಹಾಗೂ ಫಲಾನುಭವಿಗಳಿಗೆ ಖುದ್ದಾಗಿ ದಾಖಲೆಗಳನ್ನು ಉಚಿತವಾಗಿ ತಲುಪಿಸಲಿದ್ದಾರೆ.

Related Video