
CM Delhi Tour: ಅಮಿತ್ ಶಾ- ಸಿಎಂ ಬೊಮ್ಮಾಯಿ ಭೇಟಿ, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಿಲುವೇನು.?
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬೇಡಿಕೆ ಹೆಚ್ಚುತ್ತಿರುವ ನಡುವೆಯೇ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು.
ಬೆಂಗಳೂರು (ಫೆ. 08): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬೇಡಿಕೆ ಹೆಚ್ಚುತ್ತಿರುವ ನಡುವೆಯೇ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಪಂಚ ರಾಜ್ಯಗಳ ಚುನಾವಣೆ (5 States Election) ಮುಗಿಯುವವರೆಗೆ ರಾಜ್ಯ ಸಂಪುಟ ಕಸರತ್ತು ಕೈಗೊಳ್ಳುವುದು ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್ ವ್ಯಕ್ತಪಡಿಸಿದೆ.
News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ, ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು
ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ಮಾಡುವ ಮೂಲಕ ಅನಗತ್ಯ ಗೊಂದಲಕ್ಕೆ ಅವಕಾಶ ನೀಡುವುದು ಸರಿಯಲ್ಲ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜತೆಗೆ ಚರ್ಚೆ ನಡೆಸಿ ಎಂಬ ಸೂಚನೆಯನ್ನು ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.