Asianet Suvarna News Asianet Suvarna News

ಕೊರೊನಾ 4ನೇ ಅಲೆ ಬಗ್ಗೆ ನಿರ್ಲಕ್ಷ್ಯ ಬೇಡ: ಮೋದಿ ಸಭೆ ಬಳಿಕ ಸಿಎಂ ಬೊಮ್ಮಾಯಿ ಮಾತು

6-12 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿ ಅಭಿಯಾನದ ರೀತಿಯಲ್ಲಿ ಕೊಡಲು ಸೂಚನೆ ಕೊಟ್ಟಿದ್ದಾರೆ. 3 ನೇ ಡೋಸನ್ನು ಹೆಚ್ಚಿಸಲು ಸೂಚನೆ ನೀಡಿದ್ದಾರೆ' ಎಂದು ಸಭೆ ಬಳಿಕ ಸಿಎಂ ಬೊಮ್ಮಾಯಿ ಮಾಧ್ಯಮಗಳೊಂದಿಗೆ ಮಾತನಾಡಿದರು. 
 

ಬೆಂಗಳೂರು (ಏ.27): ನಾವು ರಾಜ್ಯದ ಸ್ಥಿತಿಗತಿಗಳ ಬಗ್ಗೆ ವರದಿ ನೀಡಿದ್ದೇವೆ. ನಮ್ಮ ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ.  ಹೀಗಾಗಿ ಟೆಸ್ಟಿಂಗ್‌ನ್ನು ಹೆಚ್ಚಿಸುತ್ತಿದ್ದೇವೆ. ಬೇರೆ ದೇಶಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಟ್ಟಿದ್ದೇವೆ. ಕೇಂದ್ರ ಸರ್ಕಾರವೂ ನಮಗೆ ಕೆಲವು ಸೂಚನೆ ನೀಡಿದ್ದಾರೆ. 6-12 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿ ಅಭಿಯಾನದ ರೀತಿಯಲ್ಲಿ ಕೊಡಲು ಸೂಚನೆ ಕೊಟ್ಟಿದ್ದಾರೆ. 3 ನೇ ಡೋಸನ್ನು ಹೆಚ್ಚಿಸಲು ಸೂಚನೆ ನೀಡಿದ್ದಾರೆ' ಎಂದು ಸಭೆ ಬಳಿಕ ಸಿಎಂ ಬೊಮ್ಮಾಯಿ ಮಾಧ್ಯಮಗಳೊಂದಿಗೆ ಮಾತನಾಡಿದರು. 

 ದೇಶದಲ್ಲಿ ಕೋವಿಡ್‌ ಏರಿಕೆಯಾಗಿ 4ನೇ ಅಲೆ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ವರ್ಚುವಲ್‌ ಸಭೆ ನಡೆಸಿದರು.