Covid 19: ಸೋಂಕು ನಿಯಂತ್ರಣಕ್ಕೆ ಬಿಗಿ ಕ್ರಮ..? ಇಂದು ಸಿಎಂ ಮಹತ್ವದ ಸಭೆ
ರಾಜ್ಯದಲ್ಲಿ ಕೊರೋನಾ ಹೊಸ ಪ್ರಕರಣಗಳ (Corona Case) ಸ್ಫೋಟ ಮುಂದುವರೆದಿದ್ದು, ಲಾಕ್‌ಡೌನ್ (Lockdown) ಹೇರುವ ಬದಲು ಮತ್ತಷ್ಟು ಬಿಗಿ ನಿರ್ಬಂಧಗಳನ್ನು ಜಾರಿಗೊಳಿಸುವ ಸಾಧ್ಯತೆಗಳಿವೆ.
ಬೆಂಗಳೂರು (ಜ. 17): ರಾಜ್ಯದಲ್ಲಿ ಕೊರೋನಾ ಹೊಸ ಪ್ರಕರಣಗಳ (Corona Case) ಸ್ಫೋಟ ಮುಂದುವರೆದಿದ್ದು, ಲಾಕ್‌ಡೌನ್ (Lockdown) ಹೇರುವ ಬದಲು ಮತ್ತಷ್ಟು ಬಿಗಿ ನಿರ್ಬಂಧಗಳನ್ನು ಜಾರಿಗೊಳಿಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಕೊರೋನಾ ಸೋಂಕು ಸ್ಥಿತಿಗತಿ ಅವಲೋಕನ, ಚಿಕಿತ್ಸೆಗೆ ಕೈಗೊಂಡಿರುವ ಸಿದ್ಧತೆ ಕುರಿತು ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್ ಹಾಗೂ ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ವರ್ಚುವಲ್ ಸಭೆ ನಡೆಸಲಿದ್ದಾರೆ.
Weekend Curfew: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಯಶಸ್ವಿ, ಜನಜೀವನ ಸಹಜ ಸ್ಥಿತಿಗೆ
ಇತ್ತೀಚೆಗೆ ನಡೆದ ಪ್ರಧಾನಿ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಸಾರ್ವಜನಿಕರಿಗೆ ಆರ್ಥಿಕ ಸಮಸ್ಯೆಯಾಗದಂತೆ ಸೋಂಕು ನಿಯಂತ್ರಣಕ್ಕೆ ಆಯಾ ರಾಜ್ಯಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ಹೀಗಾಗಿ, ಲಾಕ್‌ಡೌನ್ ಮಾಡುವುದಿಲ್ಲ ಎಂದು ಆರೋಗ್ಯ ಸಚಿವರು ಸ್ಪಷ್ಟನೆ ನೀಡಿದ್ದಾರೆ.