ಬಸ್ ಸ್ಟ್ರೈಕ್: ಕೆಲಸಕ್ಕೆ ಬರುವಂತೆ ಸಾರಿಗೆ ನೌಕರರಿಗೆ ಸಿಎಂ ಮನವಿ
ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯ| ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯ| 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ| ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು: ಯಡಿಯೂರಪ್ಪ|
ಬೆಂಗಳೂರು(ಏ.09): ಯಾವುದೇ ಕಾರಣಕ್ಕೆ, ಯಾರೋ ಮಾತು ಕೇಳಿ ಹಠಕ್ಕೆ ಬೀಳಬೇಡಿ, ಕಳೆದ ಒಂದು ವರ್ಷದಿಂದ ಕೋವಿಡ್ ಸಮಸ್ಯೆ ಇದ್ರೂ ಸಹ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳನ್ನ ಈಡೇರಿಸಿದ್ದೇವೆ. ಲಾಕ್‌ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2300 ಕೋಟಿ ರೂ. ಗಳ ಅನುದಾನ ನೀಡಿದೆ. 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿನಂತಿ ಮಾಡಿಕೊಂಡಿದ್ದಾರೆ.
ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾದ ಚಾಲಕ, ಸಹೋದ್ಯೋಗಿಗಳಿಂದ ಶ್ರದ್ಧಾಂಜಲಿ