ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ರೈತ ವಿದ್ಯಾ ನಿಧಿ ಯೋಜನೆಗೆ ಚಾಲನೆ

 ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ನಡೆಸಿದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಕಟಿಸಿದ್ದ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರಕಿದೆ.

ಜುಲೈ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಸ್ಕಾಲರ್‌ಶಿಪ್‌ ಯೋಜನೆ ಘೋಷಿಸಿ 1 ಸಾವಿರ ಕೋಟಿ ರು. ಮೀಸಲಿಡಲು ನಿರ್ಧರಿಸಲಾಗಿತ್ತು. ಈ ಸಂಬಂಧ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು.  ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಪೂರ್ಣಗೊಳಿಸಿದ ನಂತರ ಕರ್ನಾಟಕದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22ನೇ ಆರ್ಥಿಕ ವರ್ಷದಿಂದ ಸ್ಕಾಲರ್‌ಶಿಪ್‌ ಯೋಜನೆ ಜಾರಿಗೆ ಬರಲಿದೆ.

First Published Sep 5, 2021, 9:54 AM IST | Last Updated Sep 5, 2021, 9:54 AM IST

ಬೆಂಗಳೂರು (ಸೆ.05) : ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ನಡೆಸಿದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಕಟಿಸಿದ್ದ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರಕಿದೆ.

ರೈತರ ಮಕ್ಕಳ ಶಿಷ್ಯ ವೇತನಕ್ಕೆ ಇಂದು ಚಾಲನೆ : ಯಾರಿಗೆ ಎಷ್ಟು ?

ಜುಲೈ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಸ್ಕಾಲರ್‌ಶಿಪ್‌ ಯೋಜನೆ ಘೋಷಿಸಿ 1 ಸಾವಿರ ಕೋಟಿ ರು. ಮೀಸಲಿಡಲು ನಿರ್ಧರಿಸಲಾಗಿತ್ತು. ಈ ಸಂಬಂಧ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು.  ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಪೂರ್ಣಗೊಳಿಸಿದ ನಂತರ ಕರ್ನಾಟಕದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22ನೇ ಆರ್ಥಿಕ ವರ್ಷದಿಂದ ಸ್ಕಾಲರ್‌ಶಿಪ್‌ ಯೋಜನೆ ಜಾರಿಗೆ ಬರಲಿದೆ.

Video Top Stories