CM Siddaramaiah Press Meet: ಪ್ರಣಾಳಿಕೆಯ 76 ಕಾರ್ಯಕ್ರಮ ಬಜೆಟ್‌ನಲ್ಲಿದೆ, ನುಡಿದಂತೆ ನಡೆದಿದ್ದೇವೆ

ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಬಳಿಕ ಹೇಳಿಕೆ ನೀಡಿದ್ದಾರೆ.

First Published Jul 7, 2023, 10:04 PM IST | Last Updated Jul 7, 2023, 10:22 PM IST

ಬೆಂಗಳೂರು (ಜು.7): ದುಡ್ಡೆಲ್ಲಿಂದ ತರ್ತಾರೆ, ಗ್ಯಾರಂಟಿ ಜಾರಿ ಸಾಧ್ಯವಿಲ್ಲ, ಸರ್ಕಾರ ದಿವಾಳಿಯಾಗುತ್ತೆ ಅಂತಾ ವಿರೋಧ ಪಕ್ಷದವ್ರು ಹೇಳಿದ್ರು. ನಾವು ನಾವು ಕೊಟ್ಟ ಮಾತಿನಂತೆ ನಡೆದಿದ್ದೇವೆ, 5 ಗ್ಯಾರಂಟಿಗಳಿಗೆ ಹಣ ಹೊಂದಿಸಿದ್ದೇವೆ. ಎಂದು ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು. ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಿಲ್ಲ. ಬಡವರು-ಮಧ್ಯಮ ವರ್ಗದವರನ್ನು ಹೆಚ್ಚುವರಿ ತೆರಿಗೆ ಹೊರೆಯಿಂದ ಮುಕ್ತರಾಗಿಸಿದ್ದೇವೆ ಎಂದಿದ್ದಾರೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ 3 ಮಾನದಂಡಗಳನ್ನು ಪಾಲಿಸಬೇಕಿದ್ದು, ಈ ಪೈಕಿ 2023-24 ರ ಬಜೆಟ್ ನಲ್ಲಿ 2 ಮಾನದಂಡಗಳನ್ನು ಕಾಯ್ದುಕೊಳ್ಳುವ ಮೂಲಕ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲಾಗಿದೆ ಎಂದಿದ್ದಾರೆ.