Asianet Suvarna News Asianet Suvarna News

ಬಿಟಿಪಿಎಸ್‌ 2 ಶಾಖೋತ್ಪನ್ನ ಘಟಕ ಸ್ಥಗಿತ, ಇನ್ನೆರಡು ದಿನ ಮಾತ್ರ 1 ಘಟಕ ಕಾರ್ಯಾಚರಣೆ

ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. ಸದ್ಯ ಒಂದು ಘಟಕದಿಂದ ಮಾತ್ರ ವಿದ್ಯುತ್‌ ಉತ್ಪಾದನೆ ಮುಂದುವರಿದಿದೆ. 

ಬಳ್ಳಾರಿ (ಅ. 10): ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. ಸದ್ಯ ಒಂದು ಘಟಕದಿಂದ ಮಾತ್ರ ವಿದ್ಯುತ್‌ ಉತ್ಪಾದನೆ ಮುಂದುವರಿದಿದೆ. 

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ಹೀಗೆ

ಬಿಟಿಪಿಎಸ್‌ನ ಮೂರು ಘಟಕಗಳಿಂದ ನಿತ್ಯ 1700 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುತ್ತದೆ. ಮೂರು ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ನಿತ್ಯ 25 ಸಾವಿರ ಮೆಟ್ರಿಕ್‌ ಟನ್‌ ಕಲ್ಲಿದ್ದಲು ಬೇಕು. ಆದರೆ, ಕಲ್ಲಿದ್ದಲು ಪೂರೈಕೆಯಾಗುತ್ತಿರುವುದು ಬರೀ 8 ಸಾವಿರ ಮೆ.ಟನ್‌ ಮಾತ್ರ. ಹೀಗಾಗಿ ವಿದ್ಯುತ್‌ ಉತ್ಪಾದನೆಗೆ ಕಲ್ಲಿದ್ದಲಿನ ಅಭಾವ ಎದುರಾಗಿದೆ.