ಸಿಂಧಗಿ, ಹಾನಗಲ್ ಉಪಕದನ: 2 ಅಖಾಡ, 3 ಸಿಪಾಯಿ, ಮುಂದಿದೆ ಅಗ್ನಿ ಪರೀಕ್ಷೆ!

ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಂ.ಸಿ.ಮನಗೂಳಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಅ.30 ರಂದು ಚುನಾವಣೆ ನಡೆಯಲಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 29): ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಂ.ಸಿ.ಮನಗೂಳಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಅ.30ರಂದು ಚುನಾವಣೆ ನಡೆಯಲಿದೆ. ನ.2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಎರಡು ಕ್ಷೇತ್ರದಲ್ಲಿ 510 ಮತಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ: ಕಟೀಲ್ ಸ್ಫೋಟಕ ಹೇಳಿಕೆ

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಗುದ್ದಾಟ ಶುರುವಾಗಿದೆ. ಶ್ರೀನಿವಾಸ ಮಾನೆ ಹಾಗೂ ಮನೋಹರ ತಹಶೀಲ್ದಾರ್‌ ಬಣಗಳ ನಡುವಿನ ಭಿನ್ನಾಭಿಪ್ರಾಯ ಮುಂದುವರಿದಿದೆ. ಇನ್ನು ಉಪ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈಗಾಗಲೇ ರಾಜಕೀಯ ಚಟುವಟಿಗಳು ಬಿರುಸುಗೊಂಡಿದ್ದು, ಸಿಎಂ ಬೊಮ್ಮಾಯಿಗೆ ಅಗ್ನಿಪರೀಕ್ಷೆ ಎಂದೇ ಹೇಳಬಹುದಾಗಿದೆ. 

Related Video