ಸರ್ಕಾರದ ಭ್ರಷ್ಟಾಚಾರ ವಿರುದ್ಧ ಕರ್ನಾಟಕ ಬಂದ್‌ಗೆ ಕಾಂಗ್ರೆಸ್‌ ಕರೆ

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮಾ.9ರಂದು ಕರ್ನಾಟಕ ಬಂದ್‌ ಗೆ ರಾಜ್ಯ ಕಾಂಗ್ರೆಸ್‌ ಕರೆ ನೀಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ.6): ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಾಗೂ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮಾ.9ರ ಗುರುವಾರ 2 ಗಂಟೆಗಳ ಕಾಲ ‘ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್‌’ಗೆ ರಾಜ್ಯ ಕಾಂಗ್ರೆಸ್‌ ಕರೆ ನೀಡಿದೆ. ಬೆಳಗ್ಗೆ 9ರಿಂದ 11 ಗಂಟೆವರೆಗೆ ‘ಸಾಂಕೇತಿಕ ಬಂದ್‌’ ನಡೆಯಲಿದೆ. ಈ ವೇಳೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಬಂದ್‌ ವ್ಯಾಪ್ತಿಯಿಂದ ಹೊರಗಿಡಲಾಗುವುದು. ಉಳಿದ ಸಂಸ್ಥೆಗಳು ಹಾಗೂ ವ್ಯಾಪಾರಿಗಳು ಬಂದ್‌ಗೆ ಬೆಂಬಲ ಸೂಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮನವಿ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video