Congress Politics: ಯುವ ಕಾಂಗ್ರೆಸ್‌ ಅಧ್ಯಕ್ಷಗೆ ನಲಪಾಡ್‌ ಹಲ್ಲೆ ಆರೋಪ, ಬಿಜೆಪಿ ಷಡ್ಯಂತ್ರ..?

ಯುವ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ನಲಪಾಡ್‌ (Mohammad Nalapad) ಹಾಗೂ ಬೆಂಬಲಿಗರು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಳ್ಳಾರಿ (Ballary) ಯುವ ಕಾಂಗ್ರೆಸ್‌ ಅಧ್ಯಕ್ಷ ಸಿದ್ದು ಹಳ್ಳಿಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜ. 21): ಯುವ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ನಲಪಾಡ್‌ (Mohammad Nalapad) ಹಾಗೂ ಬೆಂಬಲಿಗರು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಳ್ಳಾರಿ (Ballary) ಯುವ ಕಾಂಗ್ರೆಸ್‌ ಅಧ್ಯಕ್ಷ ಸಿದ್ದು ಹಳ್ಳಿಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯುವ ಕಾಂಗ್ರೆಸ್‌ನ ವಾಟ್ಸ್‌ಆ್ಯಪ್‌ ಗ್ರೂಪ್‌ (Whatsapp Group) ಒಂದರಲ್ಲಿ ಸಂದೇಶ ಹಾಕಿದ್ದ ಸಿದ್ದು ಹಳ್ಳಿಗೌಡ, ಬಳಿಕ ‘ನನ್ನ ಮೇಲೆ ಯಾವುದೇ ಹಲ್ಲೆ ಆಗಿಲ್ಲ. ಈ ಬಗ್ಗೆ ಬಿಜೆಪಿ ಷಡ್ಯಂತ್ರ ಮಾಡಿ ಸುಳ್ಳು ಸುದ್ದಿ ಹರಡುತ್ತಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

News Hour: ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ, ಬದ್ಧ ವೈರಿಗಳ ಗುಪ್ತ್- ಗುಪ್ತ್ ಮಾತುಕತೆ

ಜ.30ರ ಬಳಿಕ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂಬಂಧ ಸಿದ್ಧತೆಗಾಗಿ ಸಭೆ ನಡೆಸಿದ್ದ ಬಳಿಕ ಯಲಹಂಕ ಬಳಿಯ ಹೋಟೆಲ್‌ ಒಂದರಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಿದ್ದು ಹಳ್ಳಿಗೌಡ ಯುವ ಕಾಂಗ್ರೆಸ್‌ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ನಲಪಾಡ್‌ ಹಾಗೂ ಬೆಂಬಲಿಗರು ನನ್ನ ಮೇಲೆ ಹಲ್ಲೆ ನಡೆಸಿದರು ಎಂಬ ಆರೋಪವುಳ್ಳ ಸಂದೇಶ ಹರಿದಾಡುತ್ತಿದೆ.

Related Video