ಯೋಗೇಶ್ ಗೌಡ ಕೊಲೆ ಆರೋಪಿ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಸಿದ್ಧತೆ?

ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕಮಲ ಪಾಳಯ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರ ಜೊತೆ ಇಬ್ಬರು ಮಠಾಧೀಶರು ಮಾತನಾಡಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಸರಿಯಾದ ರೆಸ್ಪಾನ್ಸ್ ಬಂದಿಲ್ಲ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 06): ಗೌಡ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕಮಲ ಪಾಳಯ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರ ಜೊತೆ ಇಬ್ಬರು ಮಠಾಧೀಶರು ಮಾತನಾಡಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಸರಿಯಾದ ರೆಸ್ಪಾನ್ಸ್ ಬಂದಿಲ್ಲ. ಅರ್‌ಎಸ್‌ಎಸ್‌ ಮುಖಂಡರ ಬಳಿ ವಿನಯ್ ಕುಲರ್ಣಿಯನ್ನು ಕಳುಹಿಸಲಾಯಿತು. ಅಲ್ಲಿಂದಲೂ ರೆಸ್ಪಾನ್ಸ್ ಬಂದಿಲ್ಲ. ಹಾಗಾಗಿ ವಿನಯ್ ಕುಲಕರ್ಣಿಗೆ ನಡುಕ ಶುರುವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯೋಗೇಶ್ ಗೌಡ ಮರ್ಡರ್ ಮಿಸ್ಟರಿ: ಸಾಕ್ಷ್ಯ ನಾಶಕ್ಕೆ ಮಾಜಿ ಸಚಿವರು ಮಾಡಿದ ಕೆಲಸವಿದು!

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕಾಗಿದೆ. ವಿನಯ್ ಕುಲಕರ್ಣಿಗೆ ಉರುಳಾಗುವ ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ ವಿನಯ್ ಕುಲಕರ್ಣಿ ಬಿಜೆಪಿ ಸೇರುವ ಸರ್ಕಸ್ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಇನ್ನೂ ಯಾವುದೇ ರೆಸ್ಪಾನ್ಸ್ ಸಿಕ್ಕಿಲ್ಲ. 

Related Video