Mekedatu Padayatre: ಈ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ.? ಕಾಂಗ್ರೆಸ್ ಜವಾಬ್ದಾರಿಯಿಂದ ವರ್ತಿಸಲಿ: ಆರಗ

ಕೊರೋನಾ (Covid 19): ಹಾವಳಿ ವಿಪರೀತ ಆಗುತ್ತಿರುವ ಕಾರಣಕ್ಕೂ ಪಾದಯಾತ್ರೆ ಕೈಬಿಡುವಂತೆ ಪ್ರತಿಪಕ್ಷ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರ ನೇರ ಆಗ್ರಹ ಮಾಡಿದೆ. ಅಲ್ಲದೆ, ವಾರಾಂತ್ಯ ಕರ್ಫ್ಯೂದಂತಹ ಕ್ರಮಗಳ ಮೂಲಕ ತಡೆಯೊಡ್ಡುವ ಪ್ರಯತ್ನವನ್ನೂ ನಡೆಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 09): ರಾಜಧಾನಿ (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ (Mekedatu Padayatre) ಹಮ್ಮಿಕೊಂಡಿದೆ. 

Add Asianetnews Kannada as a Preferred SourcegooglePreferred

Mekedatu Padayatre: ಕೋವಿಡ್ ನಿಯಮ ಪಾಲಿಸಿಯೇ ಪಾದಯಾತ್ರೆ ಮಾಡ್ತೇವೆ: ಕಾಂಗ್ರೆಸ್

ಕೊರೋನಾ ಹಾವಳಿ ವಿಪರೀತ ಆಗುತ್ತಿರುವ ಕಾರಣಕ್ಕೂ ಪಾದಯಾತ್ರೆ ಕೈಬಿಡುವಂತೆ ಪ್ರತಿಪಕ್ಷ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರ ನೇರ ಆಗ್ರಹ ಮಾಡಿದೆ. ಅಲ್ಲದೆ, ವಾರಾಂತ್ಯ ಕರ್ಫ್ಯೂದಂತಹ ಕ್ರಮಗಳ ಮೂಲಕ ತಡೆಯೊಡ್ಡುವ ಪ್ರಯತ್ನವನ್ನೂ ನಡೆಸಿದೆ. ' ಕೋವಿಡ್ ನಿಯಮ ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಪಾದಯಾತ್ರೆಯನ್ನು ಮುಂದೂಡಿ ಎಂದು ಮನವಿ ಮಾಡಿದ್ದೇವೆ. ಆದರೂ ಪಾದಯಾತ್ರೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ.? ಬೇಡವಾ.? ಎಂದು ಯೋಚಿಸಲಿ. ಕಾಂಗ್ರೆಸ್ ಜವಾಬ್ದಾರಿಯಿಂದ ವರ್ತಿಸಲಿ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

Related Video