ನಗರಾಭಿವೃದ್ಧಿ ಇಲಾಖೆಗೆ ಬಿಜೆಪಿ ಕಚೇರಿ, RSS ಕಚೇರಿ ಎಂಬ ಬೋರ್ಡ್, ಕಾಂಗ್ರೆಸ್ ಹೈಡ್ರಾಮಾ

ಬಿಬಿಎಂಪಿಯ 243 ವಾರ್ಡ್‌ಗಳಿಗೆ ಕರಡು ಮೀಸಲಾತಿ ಪಟ್ಟಿ ಪ್ರಕಟಿಸಿದ್ದು, ಇದರಿಂದ ಮಾಜಿ ಸದಸ್ಯರ ಸ್ಪರ್ಧೆಗೆ ತೊಂದರೆಯಾಗಿದ್ದು, ಬೇರೆ ಕ್ಷೇತ್ರಗಳನ್ನು ಹುಡುಕಾಟ ಮಾಡಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ.

First Published Aug 5, 2022, 5:01 PM IST | Last Updated Aug 5, 2022, 5:05 PM IST

ಬೆಂಗಳೂರು (ಆ. 05): ಬಿಬಿಎಂಪಿಯ 243 ವಾರ್ಡ್‌ಗಳಿಗೆ ಕರಡು (BBMP Ward Reservation List) ಮೀಸಲಾತಿ ಪಟ್ಟಿ ಪ್ರಕಟಿಸಿದ್ದು, ಇದರಿಂದ ಮಾಜಿ ಸದಸ್ಯರ ಸ್ಪರ್ಧೆಗೆ ತೊಂದರೆಯಾಗಿದ್ದು, ಬೇರೆ ಕ್ಷೇತ್ರಗಳನ್ನು ಹುಡುಕಾಟ ಮಾಡಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ.

ಬಿಬಿಎಂಪಿ ವಾರ್ಡ್ ಮೀಸಲಾತಿ: ಸುಪ್ರೀಂ ಕೋರ್ಟ್ ಕದತಟ್ಟಿದವರಿಗೆ ಶಾಕ್!

ಬಿಬಿಎಂಪಿ ವಾರ್ಡ್‌ ಮೀಸಲಾತಿ ಪಟ್ಟಿಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ತನ್ನೆಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ. ಆದರೆ, ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕರಡು ಮೀಸಲಾತಿ ಪಟ್ಟಿಯಲ್ಲಿ ಮಾಜಿ ಪಾಲಿಕೆ ಸದಸ್ಯರು ಅದರಲ್ಲೂ ಕಾಂಗ್ರೆಸಿಗರು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. 

'ವಿಕಾಸಸೌಧದಲ್ಲಿ ಕಾಂಗ್ರೆಸ್ ಪ್ರತಿಭಟಿಸಿದೆ. ನಗರಾಭಿವೃದ್ಧಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ. ರಾಮಲಿಂಗಾರೆಡ್ಡಿ, ಡಿಕೆ ಸುರೇಶ್ ಸೇರಿ ಹಲವರು ಭಾಗಿಯಾಗಿದ್ದರು. ನಗರಾಭಿವೃದ್ಧಿ ಕಚೇರಿ ಅಲ್ಲ, ಬಿಜೆಪಿ ಕಚೇರಿ ಎಂದು ಬೋರ್ಡ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.