Mekedatu Padayatre: ಕೋವಿಡ್ ನಿಯಮ ಪಾಲಿಸಿಯೇ ಪಾದಯಾತ್ರೆ ಮಾಡ್ತೇವೆ: ಕಾಂಗ್ರೆಸ್

ಬೆಂಗಳೂರು (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು (Mekedatu) ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದೆ. 

First Published Jan 9, 2022, 10:50 AM IST | Last Updated Jan 9, 2022, 10:50 AM IST

ಬೆಂಗಳೂರು (ಜ. 09): ರಾಜಧಾನಿ ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು (Mekedatu) ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದೆ. 

CP Yogeshwar VS DK Shivakumar: ಕನಕಪುರದಲ್ಲಿ ಡಿಕೆಶಿಗೆ ಯೋಗೇಶ್ವರ್ ಸವಾಲು, ಅಲ್ಲಿಂದಲೇ ಸ್ಪರ್ಧೆ.?

'ಇದರಲ್ಲಿ ನಾವು ಯಾವುದೇ ರೂಲ್ಸ್ ಬ್ರೇಕ್ ಮಾಡುತ್ತಿಲ್ಲ. ಕೋವಿಡ್ ನಿಯಮ ಪಾಲಿಸಿಯೇ ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಶಾಸಕ ರಂಗನಾಥ್ ಹೇಳಿದ್ದಾರೆ. 

ಕೊರೋನಾ ಹಾವಳಿ ವಿಪರೀತ ಆಗುತ್ತಿರುವ ಕಾರಣಕ್ಕೂ ಪಾದಯಾತ್ರೆ ಕೈಬಿಡುವಂತೆ ಪ್ರತಿಪಕ್ಷ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರ ನೇರ ಆಗ್ರಹ ಮಾಡಿದೆ. ಅಲ್ಲದೆ, ವಾರಾಂತ್ಯ ಕರ್ಫ್ಯೂದಂತಹ ಕ್ರಮಗಳ ಮೂಲಕ ತಡೆಯೊಡ್ಡುವ ಪ್ರಯತ್ನವನ್ನೂ ನಡೆಸಿದೆ. ಆದರೆ, ಇದ್ಯಾವುದಕ್ಕೂ ಜಗ್ಗದೆ ಕೋವಿಡ್‌ ನಿಯಮಾವಳಿ ಪಾಲಿಸಿಯೇ ಪಾದಯಾತ್ರೆ ನಡೆಸುವ ವಾಗ್ದಾನದೊಂದಿಗೆ ಕಾಂಗ್ರೆಸ್‌ ನಾಯಕರು ಪಾದಯಾತ್ರೆಗೆ ಮುಂದಾಗಿದ್ದಾರೆ.