Asianet Suvarna News Asianet Suvarna News

ಮೇ 03ರವರೆಗಿನ ಲಾಕ್‌ಡೌನ್ ಬೆಂಬಲಿಸಿದ ಕಾಂಗ್ರೆಸ್

Apr 14, 2020, 4:44 PM IST

ನವದೆಹಲಿ(ಏ.14): ಕೋವಿಡ್ 19 ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ಘೋ‍ಷಿಸಿದ ಎರಡನೇ ಹಂತದ ಲಾಕ್‌ಡೌನ್ ನಿರ್ಧಾರವನ್ನು ಪ್ರತಿಪಕ್ಷ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಇಂದು(ಏ.14) ಬೆಳಗ್ಗೆ ಎರಡನೇ ಹಂತದಲ್ಲಿ 19 ದಿನಗಳ ಲಾಕ್‌ಡೌನ್ ಘೋಷಿಸಿದ್ದಾರೆ.
"

ಮೇ 03ರವರೆಗೆ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು..?

ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ, ಪ್ರಧಾನಿ ಮೋದಿಯವರ ಲಾಕ್‌ಡೌನ್ ವಿಸ್ತರಣೆ ಉತ್ತಮ ಕ್ರಮ ಎಂದು ಹೇಳುವ ಮೂಲಕ ಬೆಂಬಲ ವ್ಯಕ್ತಪಡಿಸಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಪ್ರಧಾನಿ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಲಾಕ್‌ಡೌನ್ ಘೋಷಣೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆಂದು ಬೆಂಗಳೂರಿನಲ್ಲಿ ಡಿಕೆಶಿ ಹೇಳಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.