ರೈತರ ಪರ ನಮ್ಮ ಹೋರಾಟ ಮುಂದುವರೆಯುತ್ತದೆ: ಈಶ್ವರ್ ಖಂಡ್ರೆ
ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ, ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿತ್ತು.
ಬೆಂಗಳೂರು (ಜ. 20): ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ, ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರಾರಯಲಿ, ಸಮಾವೇಶ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿತ್ತು.
ಕೇಂದ್ರಕಾಯ್ದೆ ವಿರುದ್ಧ ಕಾಂಗ್ರೆಸ್ ಕಹಳೆ, ಕಿಸಾನ್ ಕಿಚ್ಚು, ರಾಜಧಾನಿ ಸ್ತಬ್ಧ..!
ಪೊಲೀಸರು ಬ್ಯಾರಿಕೇಡ್ ಹಾಕಿ ತಡೆ ಹಿಡಿದರೂ, ಟ್ರಾಕ್ಟರ್ ವಶಪಡಿಸಿಕೊಂಡಿದ್ದರೂ ರೈತರು ಮಾತ್ರ ಹಠ ಬಿಡದೇ ರಾಜಭವನ ಚಲೋವನ್ನು ಯಶಸ್ವಿಗೊಳಿಸಿದ್ದಾರೆ. ಇದಕ್ಕೆ ರೈತರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ನಮ್ಮ ಹೋರಾಟ ಇದೇ ರೀತಿ ಮುಂದುವರೆಯುತ್ತದೆ' ಎಮದು ಈಶ್ವರ್ ಖಂಡ್ರೆ ಹೇಳಿದ್ದಾರೆ.