Asianet Suvarna News Asianet Suvarna News

ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ, ವಿಕ್ಟೋರಿಯಾ, ಕಿಮ್ಸ್‌ನಲ್ಲಿ ಲಸಿಕೆ ವಿತರಣೆ ಆರಂಭ

ಪ್ರಧಾನಿ ನರೇಂದ್ರ ಮೋದಿ ಲಸಿಕರ ಅಭಿಯಾನಕ್ಕೆ ಚಾಲನೆ ನೀಡುತ್ತಿದ್ದಂತೆ ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಲಸಿಕೆ ವಿತರಣೆಗೆ ಚಾಲನೆ ನೀಡಿದ್ದಾರೆ. ಕೊರೊನಾ ವಾರಿಯರ್ ಚಂದ್ರಶೇಖರ್ ಎಂಬುವವರು ಮೊದಲ ಲಸಿಕೆ ಪಡೆದಿದ್ದಾರೆ. 

ಬೆಂಗಳೂರು (ಜ. 16): ಪ್ರಧಾನಿ ನರೇಂದ್ರ ಮೋದಿ ಲಸಿಕರ ಅಭಿಯಾನಕ್ಕೆ ಚಾಲನೆ ನೀಡುತ್ತಿದ್ದಂತೆ ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಲಸಿಕೆ ವಿತರಣೆಗೆ ಚಾಲನೆ ನೀಡಿದ್ದಾರೆ. ಕೊರೊನಾ ವಾರಿಯರ್ ಚಂದ್ರಶೇಖರ್ ಎಂಬುವವರು ಮೊದಲ ಲಸಿಕೆ ಪಡೆದಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಕೊರೊನಾ ಲಸಿಕೆ ವಿತರಣೆ ಶುರುವಾಗಿದೆ. 

ಲಸಿಕೆ ಪಡೆಯುವ ಮುನ್ನ ಮೋದಿ ಎಚ್ಚರಿಕೆ, ಈ ತಪ್ಪು ಮಾಡಬೇಡಿ ಎಂದ ಪಿಎಂ!

ರಾಜ್ಯದ 2443 ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ದಿನವಾದ ಇಂದು 24,300 ಮಂದಿಗೆ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರದಿಂದ 8.14 ಲಕ್ಷ ಲಸಿಕೆಗಳು ರಾಜ್ಯಕ್ಕೆ ಬಂದಿವೆ. 

Video Top Stories