ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು, ಸಿಎಂ ತುರ್ತು ಸಭೆ!
ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು| ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ| ಆತಂಕದಲ್ಲಿ ಬೆಂಗಳೂರಿಗರು
ಬೆಂಗಳೂರು[ಮಾ.10]: ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚುತ್ತಿದೆ. ಹೀಗಿರುವಾಗ ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆಯಲ್ಲಿ ಪಾಸಿಟಿವ್ ಎಂಬ ವರದಿ ಬಂದಿದೆ.
"
ನಿನ್ನೆ ಸೋಮವಾರ ಒಬ್ಬನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ಆತಂಕ ಹುಟ್ಟು ಜಹಾಕಿತ್ತು. ಆದರೀಗ ಮತ್ತಿಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಬೆಂಗಳೂರಿಗರನ್ನು ಆತಂಕ್ಕೀಡು ಮಾಡಿದೆ. ಇನ್ನು ಒಂದಾದ ಬಳಿಕ ಮತ್ತೊಂದರಂತೆ ಕೊರೋನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಿಎಂ ಯಡಿಯೂರಪ್ಪ ಈ ಸಂಬಂಧ ತುರ್ತು ಸಭೆ ಕರೆದಿದ್ದಾರೆ.