ಅಬ್ಬಬ್ಬಾ..! ಕರ್ನಾಟಕದಲ್ಲಿ 370ರ ಗಡಿ ದಾಟಿದ ಕೊರೋನಾ ಪೀಡಿತರ ಸಂಖ್ಯೆ..!

ಶುಕ್ರವಾರಕ್ಕೆ ಹೋಲಿಸಿದರೆ ಇಂದು ಪತ್ತೆಯಾದ ಪ್ರಕರಣ ಸ್ವಲ್ಪ ಇಳಿಮುಖವಾಗಿದೆ. ಶುಕ್ರವಾರ ಬರೋಬ್ಬರಿ 44 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಇಂದು ಕೇವಲ 12 ಜನರಿಗಷ್ಟೇ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.18): ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಇಂದು(ಶನಿವಾರ) ಬಿಡುಗಡೆಯಾದ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್‌ ಪ್ರಕಾರ 12 ಹೊಸ ಪ್ರಕರಣ ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 371 ತಲುಪಿದೆ.

ಶುಕ್ರವಾರಕ್ಕೆ ಹೋಲಿಸಿದರೆ ಇಂದು ಪತ್ತೆಯಾದ ಪ್ರಕರಣ ಸ್ವಲ್ಪ ಇಳಿಮುಖವಾಗಿದೆ. ಶುಕ್ರವಾರ ಬರೋಬ್ಬರಿ 44 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಇಂದು ಕೇವಲ 12 ಜನರಿಗಷ್ಟೇ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

ಕೊರೋನಾ ವೈರಸ್ ಪತ್ತೆಗೆ ಹೊಸ ಐಡಿಯಾ ರೆಡಿ..!

ರಾಜ್ಯದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದ ಯಾವೆಲ್ಲ ಜಿಲ್ಲೆಗಳಲ್ಲಿ ಇಂದು ಕೊರೋನಾ ಸೋಂಕು ಪತ್ತೆಯಾಗಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

Related Video