Asianet Suvarna News Asianet Suvarna News

ನಾನೇ ಬಿಜೆಪಿ ಅಭ್ಯರ್ಥಿ ಎಂದ ಹೊರಟ್ಟಿ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಈಶ್ವರಪ್ಪ..!

ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ನಾನೇ ಬಿಜೆಪಿ ಅಭ್ಯರ್ಥಿ ಎಂದು ಹೈಕಮಾಂಡ್ ಮೌಖಿಕವಾಗಿ ಹೇಳಿದ್ದಾರೆ. ಈ ಬಾರಿಯ ಚುನಾವಣೆ ಬಗ್ಗೆ ನನಗೆ ಭಯವಿಲ್ಲ. ನಾಮಪತ್ರ ಸಲ್ಲಿಸುವಾಗ ಸಿಎಂ ಬೊಮ್ಮಾಯಿ ಬರುತ್ತಾರೆ ಎಂದು ಬಿಜೆಪಿ ನಾಯಕ ಹೊರಟ್ಟಿ ಹೇಳಿದ್ದಾರೆ. 

ಬೆಂಗಳೂರು (ಮೇ. 23): ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ನಾನೇ ಬಿಜೆಪಿ ಅಭ್ಯರ್ಥಿ ಎಂದು ಹೈಕಮಾಂಡ್ ಮೌಖಿಕವಾಗಿ ಹೇಳಿದ್ದಾರೆ. ಈ ಬಾರಿಯ ಚುನಾವಣೆ ಬಗ್ಗೆ ನನಗೆ ಭಯವಿಲ್ಲ. ನಾಮಪತ್ರ ಸಲ್ಲಿಸುವಾಗ ಸಿಎಂ ಬೊಮ್ಮಾಯಿ ಬರುತ್ತಾರೆ ಎಂದು ಬಿಜೆಪಿ ನಾಯಕ ಹೊರಟ್ಟಿ ಹೇಳಿದ್ದಾರೆ. 

'ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ಸಿಗರು ಸುಮ್ಮನೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಸರ್ಕಾರ ಧರ್ಮ ರಕ್ಷಣೆ, ರಾಷ್ಟ್ರ ರಕ್ಷಣೆ ಮಾಡುತ್ತಿದೆ. ಹೀಗಾಗಿ ಸಿಎಂ ಬದಲಾವಣೆ ಇಲ್ಲ' ಎಂದು ಈಶ್ವರಪ್ಪ ಹೇಳಿದ್ದಾರೆ.