Asianet Suvarna News Asianet Suvarna News

ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಏರಿಕೆ, ಹೊಸ ನಿಯಮಕ್ಕೆ ಬಿಬಿಎಂಪಿ ಸಿದ್ಧತೆ

ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು (Covid 19) ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಪತ್ತೆಯಾದ ಶೇ. 97 ರಷ್ಟು ಕೇಸ್‌ಗಳು ಬೆಂಗಳೂರಿನಲ್ಲೇ (Bengaluru) ಪತ್ತೆಯಾಗಿದೆ. ನಿನ್ನೆ ರಾಜ್ಯದಲ್ಲಿ ಒಟ್ಟು 133 ಕೊರೊನಾ ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗಿದೆ. 

ಬೆಂಗಳೂರು (ಏ.30): ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು (Covid 19) ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಪತ್ತೆಯಾದ ಶೇ. 97 ರಷ್ಟು ಕೇಸ್‌ಗಳು ಬೆಂಗಳೂರಿನಲ್ಲೇ (Bengaluru) ಪತ್ತೆಯಾಗಿದೆ. ನಿನ್ನೆ ರಾಜ್ಯದಲ್ಲಿ ಒಟ್ಟು 133 ಕೊರೊನಾ ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗಿದೆ.

ಬೆಂಗಳೂರಲ್ಲೇ 127 ಪಾಸಿಟಿವ್ ಕೇಸ್‌ ದಾಖಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಹೊಸ ನಿಯಮ ಜಾರಿಗೆ ತರಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಮಾಲ್, ಥಿಯೇಟರ್, ಸಾರ್ವಜನಿಕ ಪ್ರದೇಶಗಳಲ್ಲಿ ಜನರು ಕೋವಿಡ್ ನಡಾವಳಿಗಳನ್ನು ಪಾಲಿಸಬೇಕು. ಬೂಸ್ಟರ್ ಡೋಸ್, ಮಕ್ಕಳ ವ್ಯಾಕ್ಸಿನೇಷನ್ ಬಗ್ಗೆ ಜಾಗೃತಿ ಮೂಡಿಸಲು ಬಿಬಿಎಂಪಿ ಮುಂದಾಗಿದೆ.