ಬೆಂಗಳೂರಿನ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಕೊರೋನಾ ಸೋಂಕಿತ..!

ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಯಿಂದ ಆಸ್ಪತ್ರೆಯ ಮೂರನೇ ಮಹಡಿಯಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.27): ಚಿಕಿತ್ಸೆ ಪಡೆಯುತ್ತಿದ್ದ 56 ವರ್ಷದ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ ಮೂರನೇ ಮಹಡಿಯಿಂದ ಜಿಗಿದುಬಿದ್ದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಇಂದು ಬೆಳಗ್ಗೆ(ಸೋಮವಾರ) ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಡಯಬಿಟೀಸ್ ರೋಗದಿಂದ ಬಳಲುತ್ತಿದ್ದರು. ಡಯಾಲಿಸಿಸ್‌ಗೆ ಬಂದಾಗ ಆತನಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಿದಾಗ ಕೊರೋನ ಸೋಂಕು ಇರುವುದು ದೃಢಪಟ್ಟಿತ್ತು. 

ಇದನ್ನು ಓದಿ: ಕೊರೋನಾ ಸೋಂಕಿ​ತರ ಪತ್ತೆಗೆ ಬದಲಿ ​ಮಾರ್ಗ: ಇಲ್ಲಿದೆ ಮಾಸ್ಟರ್‌ ಪ್ಲಾನ್‌..!

ಸಾಮಾನ್ಯವಾಗಿ ಕೊರೋನಾ ಚಿಕಿತ್ಸೆ ಪಡೆಯುತ್ತಿರುವವರು ರೂಂನಿಂದ ಹೊರಗೆ ಬರಲು ಸಾಧ್ಯವಾಗುವುದಿಲ್ಲ. ಆದರೆ ಈ ವ್ಯಕ್ತಿ ಹೊರಗೆ ಬಂದಿದ್ದು ಹೇಗೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಮೇಲ್ನೋಟಕ್ಕೆ ಆತ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. 

"

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಕೊಡುವುದರ ಜತೆಗೆ ವೈದ್ಯರು ಕೌನ್ಸಿಲಿಂಗ್ ಕೂಡಾ ಮಾಡುತ್ತಿರುತ್ತಾರೆ. ಇದರ ಹೊರತಾಗಿಯೂ ಆತ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ ಎನ್ನುವುದರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ವಿವಿ ಪುರಂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. 


Related Video