ಬೆಂಗಳೂರಿನಲ್ಲಿ ಇಂದಿನಿಂದ ಮನೆ ಮನೆಯಲ್ಲೂ ಕೋವಿಡ್ ಟೆಸ್ಟ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣ ನಿಯಂತ್ರಿಸಲು 8500 ಬೂತ್ ಮಟ್ಟದ ‘ಕಾರ್ಯ ಪಡೆ’ ರಚಿಸಿ, ಪ್ರತಿ ಮನೆಗಳ ಸಮೀಕ್ಷೆ ಹಾಗೂ ಪರೀಕ್ಷೆ ಮಾಡಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು (ಏ. 09): ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣ ನಿಯಂತ್ರಿಸಲು 8500 ಬೂತ್ ಮಟ್ಟದ ‘ಕಾರ್ಯ ಪಡೆ’ ರಚಿಸಿ, ಪ್ರತಿ ಮನೆಗಳ ಸಮೀಕ್ಷೆ ಹಾಗೂ ಪರೀಕ್ಷೆ ಮಾಡಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ನಾಳೆಯಿಂದ ನೈಟ್ ಕರ್ಫ್ಯೂ, ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬದಲಿಸಿ
ನಗರದಲ್ಲಿ ನಿತ್ಯ 5 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ದಿನಕ್ಕೆ ಒಂದು ಲಕ್ಷ ಕೊರೋನಾ ಪರೀಕ್ಷೆ ನಡೆಸಬೇಕು. ಒಂದು ಪ್ರಕರಣಕ್ಕೆ 20 ಜನರ ತಪಾಸಣೆ ಮಾಡಲಾಗುವುದು. ಸಾರ್ವಜನಿಕರು ಸಹ ಪರೀಕ್ಷೆ ನಡೆಸಲು ಮನೆಗೆ ಬಂದಾಗ ಸಹಕರಿಸಬೇಕು ಎಂದು ಮನವಿ ಮಾಡಿದರು.