ನಾಳೆಯಿಂದ ಬೆಂಗಳೂರಿನಲ್ಲಿ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ ಕೊರೊನಾ ಲಸಿಕೆ
ನಾಳೆಯಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು.
ಬೆಂಗಳೂರು (ಮೇ. 09): ನಾಳೆಯಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು.
ಬೆಂಗಳೂರಿನ 10 ವಾರ್ಡ್‌ಗಳು ಡೇಂಜರಸ್, 25 ಸಕ್ರಿಯ ಕೇಸ್‌ಗಳು ದಾಖಲು
18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.