Weekend Curfew: ಇಂದು ಸಿಎಂ ಹೈವೋಲ್ಟೇಜ್ ಮೀಟಿಂಗ್, ಸಂಭಾವ್ಯ ನಿರ್ಬಂಧಗಳೇನು.?

ಕೋವಿಡ್‌ ಸೋಂಕು (CoronaVirus) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend Curfew) ಮತ್ತು ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಹೈ ವೋಲ್ಟೇಜ್ ಮೀಟಿಂಗ್ ನಡೆಯಲಿದೆ. 

First Published Jan 21, 2022, 9:28 AM IST | Last Updated Jan 21, 2022, 9:51 AM IST

ಬೆಂಗಳೂರು (ಜ. 21): ಕೋವಿಡ್‌ ಸೋಂಕು (CoronaVirus) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend Curfew) ಮತ್ತು ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಹೈ ವೋಲ್ಟೇಜ್ ಮೀಟಿಂಗ್ ನಡೆಯಲಿದೆ. 

ವೀಕೆಂಡ್ ಕರ್ಫ್ಯೂ ಬಗ್ಗೆ ವಿವಿಧ ಸಂಘ ಸಂಸ್ಥೆಗಳಲ್ಲದೆ ಆಡಳಿತಾರೂಢ ಪಕ್ಷದ ಹಿರಿಯ ನಾಯಕರಿಂದಲೂ ಅಪಸ್ವರ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಹುತೇಕ ಕೆಲವು ಬಿಗಿ ಕ್ರಮಗಳೊಂದಿಗೆ ವಾರಾಂತ್ಯ ಕರ್ಫ್ಯೂ ರದ್ದುಪಡಿಸುವ ಅಥವಾ ಸಡಿಲಗೊಳಿಸುವ ಸಾಧ್ಯತೆಯೇ ಹೆಚ್ಚಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ನಡೆಯುವ ಸಭೆಯಲ್ಲಿ ಬೊಮ್ಮಾಯಿ ಸೇರಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಕಂದಾಯ ಸಚಿವ ಆರ್‌.ಅಶೋಕ್‌, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೇರಿದಂತೆ ಇತರೆ ಸಚಿವರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. 

. ವಾರಾಂತ್ಯ ಕಫ್ರ್ಯೂ ತೆರವು, ರಾತ್ರಿ ಕಫ್ರ್ಯೂ ಅವಧಿ ಕಡಿತಗೊಳಿಸುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ 5 ರಿಂದ 9ರವರೆಗೆ ಶಾಲಾ ತರಗತಿ ಆರಂಭವಾಗುವ ಸಾಧ್ಯತೆ ಇದೆ. 

 

Video Top Stories