Asianet Suvarna News Asianet Suvarna News

Covid 19: ರಾಜ್ಯದಲ್ಲಿ ಕೊಂಚ ಇಳಿಕೆ ಕಂಡ ಕೊರೊನಾ, ನಿಟ್ಟುಸಿರು!

ರಾಜ್ಯದಲ್ಲಿ ಕೊರೊನಾ ಸೋಂಕು (Covid 19) ಕೊಂಚ ಇಳಿಕೆಯಾಗಿದೆ. ಶನಿವಾರ ಒಂದೇ ದಿನ 42,470 ಕೊರೊನಾ ಕೇಸ್ ದಾಖಲಾಗಿದೆ. 26 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 3.30.447 ಸಕ್ರಿಯ ಪ್ರಕರಣ, 35,140 ಡಿಸ್ಚಾರ್ಜ್, ಪಾಸಿಟಿವಿಟಿ ದರ ಶೇ. 19.33 ಇದೆ. 
 

ಬೆಂಗಳೂರು (ಜ. 23): ರಾಜ್ಯದಲ್ಲಿ ಕೊರೊನಾ ಸೋಂಕು (Covid 19) ಕೊಂಚ ಇಳಿಕೆಯಾಗಿದೆ. ಶನಿವಾರ ಒಂದೇ ದಿನ 42,470 ಕೊರೊನಾ ಕೇಸ್ ದಾಖಲಾಗಿದೆ. 26 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 3.30.447 ಸಕ್ರಿಯ ಪ್ರಕರಣ, 35,140 ಡಿಸ್ಚಾರ್ಜ್, ಪಾಸಿಟಿವಿಟಿ ದರ ಶೇ. 19.33 ಇದೆ. 

ರಾಜಧಾನಿಯಲ್ಲಿಯೂ ಕೊರೋನಾ ಸೋಂಕು ತುಸು ಇಳಿಕೆಯಾಗಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಶನಿವಾರ ನಗರದಲ್ಲಿ 17,266 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ.

ಹೊಸ ಸೋಂಕಿತರ ಪತ್ತೆಯಿಂದ ನಗರದಲ್ಲಿ ಈವರೆಗಿನ ಸೋಂಕಿತರ ಸಂಖ್ಯೆ 15.59 ಲಕ್ಷಕ್ಕೆ ಏರಿಕೆಯಾಗಿದೆ. 22,511 ಮಂದಿ ಸೋಂಕಿತರು ಬಿಡುಗಡೆಯಾಗಿದ್ದು, ಇದುವರೆಗೆ 13.24 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ. ಆರು ಮಂದಿ ಸಾವಿನಿಂದ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 16,490ಕ್ಕೆ ಹೆಚ್ಚಳವಾಗಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 2.18 ಲಕ್ಷಕ್ಕೆ ಏರಿಕೆಯಾಗಿದೆ.


 

Video Top Stories