Covid-19: ರಾಜ್ಯದಲ್ಲಿ ರದ್ದಾಗುತ್ತಾ ನೈಟ್, ವೀಕೆಂಡ್ ಕರ್ಫ್ಯೂ?

ರಾಜ್ಯದಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ರದ್ದು ಮಾಡುವಂತೆ ಒತ್ತಡ
ನಾಳೆ ಸಿಎಂ ನೇತೃತ್ವದಲ್ಲಿ ನಡೆಯಲಿದೆ ಸಭೆ
ವೀಕೆಂಡ್ ಕರ್ಫ್ಯೂ ರದ್ದು ಬಗ್ಗೆ ಬಾಯ್ಬಿಡದ ಆರೋಗ್ಯ ಸಚಿವ ಸುಧಾಕರ್

Share this Video
  • FB
  • Linkdin
  • Whatsapp

ಬೆಂಗಳೂರು (ಜ. 20): ರಾಜ್ಯದಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವಂತೆ ಹೋಟೆಲ್, ಬಾರ್ ಮಾಲೀಕರು, ಉದ್ಯಮಿಗಳ ಸಂಘ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದು ಈ ಕುರಿತಾಗಿ ಶುಕ್ರವಾರ ರಾಜ್ಯ ಸರ್ಕಾರದ ಸಭೆ ನಡೆಯಲಿದೆ. ಈವರೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳ್ಳುವ ಬಗ್ಗೆ ಒಂಚೂರು ಬಾಯ್ಬಿಡದ ಆರೋಗ್ಯ ಸಚಿವ ಕೆ. ಸುಧಾಕರ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Weekend Curfew ರದ್ದಿಗೆ ಬಿಗಿಪಟ್ಟು: ಚಿತ್ರ ಪ್ರದರ್ಶನ ರದ್ದು
ಈ ಕುರಿತಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, "ಇನ್ನೂ 24 ಗಂಟೆಗಳಿವೆ ಕಾಯಿರಿ, ಜನರಿಗೆ ತೊಂದರೆ ಕೊಡುವ ಯಾವ ಉದ್ದೇಶವೂ ಸರ್ಕಾರಕ್ಕೆ ಇಲ್ಲ. ಜನರ ಆರೋಗ್ಯದ ದೃಷ್ಟಿಯಲ್ಲಿ ನಾಳೆ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇವೆ. ಜನರಿಗೆ ತೊಂದರೆ ಕೊಡುವುದರಿಂದ ಸರ್ಕಾರಕ್ಕೆ ಲಾಭವೂ ಇಲ್ಲ, ನಷ್ಟವೂ ಇಲ್ಲ' ಎಂದು ಹೇಳಿದ್ದಾರೆ. ರಾಜ್ಯ ಬಿಜೆಪಿಯ ಸಚಿವರು ಹಾಗೂ ಶಾಸಕರು ಕೂಡ ವೀಕೆಂಡ್ ಕರ್ಫ್ಯೂ ತೆಗೆಯುವುದು ಸೂಕ್ತ ಎಂದು ಹೇಳಿದ್ದಾರೆ. ಇದರಿಂದಾಗಿ ರಾಜ್ಯದ ಜನರಿಗೆ ಶುಭ ಶುಕ್ರವಾರವಾಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

Related Video