Lingayat Community: ರಾಜ್ಯದಲ್ಲಿ ಮತ್ತೆ ಲಿಂಗಾಯತ ಸ್ವತಂತ್ರಧರ್ಮದ ಕೂಗು!
ಲಿಂಗಾಯತ ಧರ್ಮದ ಸಾಂವಿಧಾನಿಕ ಮಾನ್ಯತೆಗಾಗಿ ನ್ಯಾ. ನಾಗಮೋಹನದಾಸರ ನೇತೃತ್ವದ ವರದಿಯನ್ನು ಮತ್ತೊಮ್ಮೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡುವಂತೆ ಒತ್ತಾಯಿಸಿ ಫೆ. 20ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಫ್ರೀಡ್‌ಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಲಿಂಗಾಯತ ಧರ್ಮದ ಸಾಂವಿಧಾನಿಕ ಮಾನ್ಯತೆಗಾಗಿ ನ್ಯಾ. ನಾಗಮೋಹನದಾಸರ ನೇತೃತ್ವದ ವರದಿಯನ್ನು ಮತ್ತೊಮ್ಮೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡುವಂತೆ ಒತ್ತಾಯಿಸಿ ಫೆ. 20ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಫ್ರೀಡ್‌ಂ ಪಾರ್ಕ್ನಲ್ಲಿ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ಗೌರವಾಧ್ಯಕ್ಷ ಡಾ. ಚನ್ನಬಸವಾನಂದ ಸ್ವಾಮೀಜಿ ಹೇಳಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ವೇಳೆ ನ್ಯಾ. ನಾಗಮೋಹನದಾಸ ನೇತೃತ್ವದ ತಜ್ಞರ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ವರದಿ ಪ್ರಕಾರ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಎಂದು ಸಂಪುಟ ಸಭೆಯಲ್ಲಿ ಅಂಗೀಕರಿಸಿ ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರಲಿಲ್ಲ. ಈಗ ಬಿಜೆಪಿ ಸರ್ಕಾರ ರಾಜ್ಯ ಹಾಗೂ ಕೇಂದ್ರದಲ್ಲಿದೆ. ಮತ್ತೊಮ್ಮೆ ವರದಿಯನ್ನು ಶಿಫಾರಸು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.