ಪ್ರವಾಹದಲ್ಲಿ ಕೊಚ್ಚಿ ಹೋದ ಬದುಕು, ಕೃಷ್ಣಾ ತೀರದಲ್ಲಿ ನೀರವ ಮೌನ, ಸಂಕಷ್ಟದಲ್ಲಿ ಸಂತ್ರಸ್ತರು!
ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದು, ಪ್ರವಾಹ ತಗ್ಗಿದೆ. ಆದರೆ ಪ್ರವಾಹ ತಂದಿಟ್ಟ ಸಂಕಷ್ಟ ಅಷ್ಟಿಷ್ಟಲ್ಲ. ಆಸರೆಯಾಗಿದ್ದ ಮನೆ ಕುಸಿದು ಬಿದ್ದಿದೆ. ಜೀವನಕ್ಕೆ ಆಧಾರವಾಗಿದ್ದ ಬೆಳೆ ಕೊಚ್ಚಿ ಹೋಗಿದೆ.
ಬೆಳಗಾವಿ (ಆ. 05): ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದು, ಪ್ರವಾಹ ತಗ್ಗಿದೆ. ಆದರೆ ಪ್ರವಾಹ ತಂದಿಟ್ಟ ಸಂಕಷ್ಟ ಅಷ್ಟಿಷ್ಟಲ್ಲ. ಆಸರೆಯಾಗಿದ್ದ ಮನೆ ಕುಸಿದು ಬಿದ್ದಿದೆ. ಜೀವನಕ್ಕೆ ಆಧಾರವಾಗಿದ್ದ ಬೆಳೆ ಕೊಚ್ಚಿ ಹೋಗಿದೆ.
ಉತ್ತರ ಕನ್ನಡದಲ್ಲಿ ಪ್ರವಾಹ ತಂದ ಸಂಕಷ್ಟ: ಪರಿಹಾರಕ್ಕಾಗಿ ಸಂತ್ರಸ್ತರ ಒತ್ತಾಯ
ತಾತ್ಕಾಲಿಕವಾಗಿ ಅಲ್ಲಲ್ಲಿ ಶೆಡ್‌ಗಳನ್ನು ಹಾಕಿಕೊಂಡು ಬದುಕುತ್ತಿದ್ದಾರೆ. ಇವರಿಗೆ ಅವರಿಗೆ ಕಾಳಜಿ ಕೇಂದ್ರದಲ್ಲಿ ಊಟ, ಉಪಾಹಾರದ ವ್ಯವಸ್ಥೆ ಮಾಡಲಾಗುತ್ತದೆ. ಇನ್ನು ನೀರು ಇಳಿಮುಖಗೊಂಡಿದ್ದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗದ ಭೀತಿ ಗ್ರಾಮಸ್ಥರಲ್ಲಿ ಆವರಿಸಿದೆ. ಹೀಗಾಗಿ ಜನರು ಮನೆಗಳಿಗೆ ಹೋದರೂ ಸಾಂಕ್ರಾಮಿಕ ರೋಗಕ್ಕೆ ತುತ್ತಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಇವರ ಸಮಸ್ಯೆಯ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ.