ಧರ್ಮಸ್ಥಳದ ವಿರೋಧಿ ಷಡ್ಯಂತ್ರ.. ಸಮೀರ್ ಮನೆಯ ಮೇಲೆ ದಾಳಿ! ಪೊಲೀಸರಿಗೆ ಸಿಕ್ಕಿದ್ದೇನು?

ಬೆಳ್ತಂಗಡಿ ಪೊಲೀಸರು ಯುಟ್ಯೂಬರ್ ಸಮೀರ್ ಅವರ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಬೆಳ್ತಂಗಡಿ ಪೊಲೀಸರು ಯುಟ್ಯೂಬರ್ ಸಮೀರ್ ಅವರ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬುಧವಾರ ಬೆಳ್ತಂಗಡಿ ನ್ಯಾಯಾಲಯ ಹೊರಡಿಸಿದ ಸರ್ಚ್ ವಾರಂಟ್ ಅಡಿಯಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದರು. ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ, ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಹುಲ್ಲಹಳ್ಳಿಯಲ್ಲಿರುವ ಆತನ ಬಾಡಿಗೆ ಮನೆಗೆ ಭೇಟಿ ನೀಡಿ, ಮಹಜರು ನಡೆಸಿದರು. ಪೊಲೀಸರು ಮುಂಚಿತವಾಗಿಯೇ ಸಮೀರ್‌ಗೆ ಮಹಜರು ಪ್ರಕ್ರಿಯೆಗೆ ಆಗಮಿಸುವುದಾಗಿ ಮಾಹಿತಿ ನೀಡಿದ್ದರು.

ಹೀಗಾಗಿ, ಆತ ಮನೆಯಲ್ಲಿಯೇ ಇದ್ದ. ಜೊತೆಗೆ, ಗಿರೀಶ್ ಮಟ್ಟಣ್ಣವರ್ ಕೂಡ ಇದ್ದರು. ಸ್ಥಳ ಮಹಜರು ನಡೆಸಿದ ಪೊಲೀಸರು, ಅದರ ವಿಡಿಯೋ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿ ತೆರಳಿದರು. ನಂತರ ಗಿರೀಶ್ ಮಟ್ಟಣ್ಣವರ್ ಮಾತನಾಡಿ, ಇದು ಪೊಲೀಸ್ ರೇಡ್ ಅಲ್ಲ. ಧರ್ಮಸ್ಥಳ ಕೇಸ್‌ನ ವಿಚಾರಣೆಯೂ ಅಲ್ಲ. ‘ಧರ್ಮಸ್ಥಳ ದಣಿಗಳ ಚಾಟೂ (ಗುಲಾಮರು)ಗಳು’ ಎಂದು ಎಐ ವಿಡಿಯೋದಲ್ಲಿ ಬಳಸಿದ ಒಂದು ಶಬ್ದವನ್ನು ಉಲ್ಲೇಖಿಸಿ ಬೆಳ್ತಂಗಡಿ ಪೊಲೀಸರು ಉದ್ದೇಶಪೂರ್ವಕವಾಗಿ ಸುಮೋಟೋ ಕೇಸ್ ದಾಖಲು ಮಾಡಿಕೊಂಡಿದ್ದರು. ಆ ಕೇಸ್‌ನ ಸಂಬಂಧ ಸ್ಥಳ ಮಹಜರು ಮಾಡಿದ್ದಾರೆ ಎಂದರು. ಆದರೆ, ಸಮೀರ್ ಯಾವುದೇ ಪ್ರತಿಕ್ರಿಯೆ ನೀಡದೆ, ಮಟ್ಟಣ್ಣವರ್‌ ಜೊತೆಗೆ ಹೊರಟು ಹೋದರು.

Related Video