ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಯೂಟರ್ನ್? ಆರೋಪಿ ವಿನಯ್ ಕುಲಕರ್ಣಿಗೆ ಕೇಕ್ ತಿನ್ನಿಸಿದ ಮಲ್ಲಮ್ಮ!

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಟ್ವಿಸ್ಟ್ ಎದುರಾಗಿದೆ. ಪತಿ ಸಾವಿಗೆ ನ್ಯಾಯ ಕೇಳುವ ಬದಲು ಮಲ್ಲಮ್ಮ, ಇದೀಗ ಪತಿ ಕೊಂದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕೇಕ್ ತಿನ್ನಿಸುತ್ತಿರುವ ಫೋಟೋ ಒಂದು ಭಾರಿ ಕೋಲಾಹಲ ಸೃಷ್ಟಿಸಿದೆ.
 

Chethan Kumar  | Published: Dec 19, 2024, 3:46 PM IST

ಧಾರವಾಡ(ಡಿ.18) ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಕರ್ನಾಟಕದಲ್ಲಿ ಭಾರಿ ಸದ್ದು ಮಾಡಿತ್ತು. ಪ್ರಮುಖವಾಗಿ ರಾಜಕೀಯ ದೃಷ್ಟಿಯಿಂದ ಈ ಪ್ರಕರಣ ಭಾರಿ ಕೋಲಾಹಲ ಸೃಷ್ಟಿಸಿತ್ತು. ಇದೇ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಜೈಲು ಸೇರಿ ಬಿಡುಗಡೆಯಾಗಿದ್ದಾರೆ. ಇದೀಗ ಇದೇ ಆರೋಪಿ ವಿನಯ್ ಕುಲಕರ್ಣಿಗೆ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಕೇಕ್ ತಿನ್ನಿಸುತ್ತಿರುವ ಫೋಟೋ ಭಾರಿ ವೈರಲ್ ಆಗಿದೆ. ಇದು ಅನುಮಾನಗಳಿಗೆ ಕಾರಣವಾಗಿದೆ 
 

Read More...