Asianet Suvarna News Asianet Suvarna News

ಮಾಧ್ಯಮ, ಪೊಲೀಸರ ಮೇಲೆ ಹಲ್ಲೆ ಖಂಡನೀಯ; ಗಲಭೆಕೋರರ ಮೇಲೆ ಕಠಿಣ ಕ್ರಮಕ್ಕೆ ಡಿಕೆಶಿ ಆಗ್ರಹ

ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿದೆ. 

ಬೆಂಗಳೂರು (ಆ. 12): ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿದೆ. 

ಗಲಭೆಕೋರರು ಮಾಧ್ಯಮ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ' ಮಾಧ್ಯಮದವರ ಮೇಲೆ, ಪೊಲೀಸರ ಮೇಲೆ ಹಲ್ಲೆಯಾಗಿರುವುದು ಖಂಡನೀಯ. ಇದನ್ನು ಯಾರೂ ಕೂಡಾ ಒಪ್ಪಲು ಸಾಧ್ಯವಿಲ್ಲ. ಯಾರೂ ಯಾರಿಗೂ ಸರ್ಟಿಫಿಕೇಟ್ ಕೊಡಬೇಕಾಗಿಲ್ಲ. ಈ ದೇಶದ ಕಾನೂನು ಎಲ್ಲರಿಗೂ ಒಂದೇ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. 

'ಗಲಭೆ ಹಿಂದೆ ಯಾರೇ ಇರಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು': ಎಚ್‌ಡಿಕೆ