ಡಿ.ಕೆ. ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು; ಡೆಂಗ್ಯೂ ಶಂಕೆ?

ಇತ್ತೀಚೆಗಷ್ಟೇ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬಂದಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಆರೋಗ್ಯ ಏರುಪೇರಾಗಿರುವ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಡಿಕೆಶಿ ರಕ್ತ ಪರೀಕ್ಷೆ ನಡೆಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ನ.02): ಇತ್ತೀಚೆಗಷ್ಟೇ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬಂದಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಆರೋಗ್ಯ ಏರುಪೇರಾಗಿರುವ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರೋಗ್ಯ ಹದಗೆಟ್ಟಿರುವ ಕಾರಣ ಶುಕ್ರವಾರ ಸಂಜೆಯೇ ಡಿಕೆಶಿ ಆಸ್ಪತ್ರೆಗೆ ದಾಖಲಾಗಿದ್ದರು. ಈಗಾಗಲೇ ಬೆನ್ನು ನೋವು, ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವ ಡಿಕೆಶಿಗೆ ಈಗ ಜ್ವರ ಕಾಡುತ್ತಿದೆ. ವೈದ್ಯರು ಡಿಕೆಶಿ ರಕ್ತ ಪರೀಕ್ಷೆ ನಡೆಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಡಿಕೆಶಿ, 48 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದರು. 

Related Video