ಮಾಡು ಇಲ್ಲವೇ ಮಡಿ ಹೋರಾಟಕ್ಕೆ ರೈತರು ಸಿದ್ಧ: ಸರ್ಕಾರಕ್ಕೆ ಕೋಡಿಹಳ್ಳಿ ಎಚ್ಚರಿಕೆ
ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಇಂದು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂಬ ನಿಲುವಿಗೆ ಬಂದಿದ್ದಾರೆ.
ಬೆಂಗಳೂರು (ಡಿ. 09): ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಇಂದು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂಬ ನಿಲುವಿಗೆ ಬಂದಿದ್ದಾರೆ.
ನಿಮಗಿಂತ ಹೆಚ್ಚು ಕಾಳಜಿ ಪ್ರಧಾನಿಗೆ ರೈತರ ಮೇಲಿದೆ, ಪ್ರತಿಭಟನೆ ಕೈ ಬಿಡಿ : ಸಿಎಂ ಮನವಿ
'ರೈತರು ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಸಿದ್ಧವಾಗಿದ್ದಾರೆ. ಟೋಲ್‌ಗಳಲ್ಲಿ ರೈತರನ್ನು ತಡೆಯುವ ಪ್ರಯತ್ನ ಮಾಡಲಾಗಿದೆ. ಇದು ಸರಿಯಾದ ನಡೆವಳಿಕೆ ಅಲ್ಲ. ನಾವು ಅಹಿತಕರ ಘಟನೆ ಮಾಡಿದ್ರೆ ಕ್ರಮ ಕೈಗೊಳ್ಳಬೇಕು. ಅದು ಬಿಟ್ಟು ದಾರಿಗಳಲ್ಲೆಲ್ಲಾ ಅಡ್ಡ ಹಾಕೋದು ಸರಿಯಲ್ಲ. ಕೂಡಲೇ ರೈತರನ್ನು ಬಿಡಬೇಕು' ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.