ಕೊರೋನಾ ವ್ಯಾಕ್ಸಿನ್ ಬಗ್ಗೆ ವೈದ್ಯರಲ್ಲೇ ಅಸಮಾಧಾನ..!
ಈಗಾಗಲೇ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ನೀಡಲು ಸರ್ಕಾರ ಅನುಮತಿ ನೀಡಿದೆ. ಆದರೆ ಲಸಿಕೆ ಪಡೆಯುವ ಮುನ್ನ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಿರುವುದೇಕೆ ಎಂದು ವೈದ್ಯರು ಸಚಿವರನ್ನು ಪ್ರಶ್ನಿಸಿದ್ದಾರೆ.
ಬೆಂಗಳೂರು(ಜ.19): ಕೊರೋನಾ ಲಸಿಕೆ ವಿಚಾರದಲ್ಲಿ ವೈದ್ಯಲೋಕದಲ್ಲಿ ಭಿನ್ನಾಭಿಪ್ರಾಯಗಳು ತಲೆದೂರಿದ್ದು, ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರಿಗೆ ವೈದ್ಯರು ಪತ್ರ ಬರೆದಿದ್ದಾರೆ.
ಈಗಾಗಲೇ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ನೀಡಲು ಸರ್ಕಾರ ಅನುಮತಿ ನೀಡಿದೆ. ಆದರೆ ಲಸಿಕೆ ಪಡೆಯುವ ಮುನ್ನ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಿರುವುದೇಕೆ ಎಂದು ವೈದ್ಯರು ಸಚಿವರನ್ನು ಪ್ರಶ್ನಿಸಿದ್ದಾರೆ.
ಕೋವಿಡ್ ಲಸಿಕೆ ಪಡೆಯಲು ಸ್ಟಾಫ್ ನರ್ಸ್ ಹಿಂದೇಟು
ಕೊರೋನಾ ಲಸಿಕೆ ಪಡೆದು ಅಡ್ಡಪರಿಣಾಮಗಳಾದರೆ ನಾವೇ ಜವಾಬ್ದಾರಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಎರಡು ಲಸಿಕೆಗಳ ಪೈಕಿ ಆಯ್ಕೆಯ ಅವಕಾಶ ನೀಡದೇ ಇರುವುದಕ್ಕೆ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.