ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ: ಡಾ. ಸುಧಾಕರ್

ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದ ವಸಂತಪುರ ವಾರ್ಡ್‌ನ ಒಂದೇ ಕುಟುಂಬದ ಮೂವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇವರ ಪ್ರಾಥಮಿಕ ಹಾಗೂ ಎರಡನೇ ಸಂಪರ್ಕದಲ್ಲಿರುವವರನ್ನು ಪತ್ತೆ ಮಾಡಿ, ಕ್ವಾರಂಟೈನ್ ಮಾಡುವ ಕಾರ್ಯ ನಡೆಯುತ್ತಿದೆ. 

 

First Published Dec 29, 2020, 3:29 PM IST | Last Updated Dec 29, 2020, 3:29 PM IST

ಬೆಂಗಳೂರು (ಡಿ. 29): ಬ್ರಿಟನ್‌ನ ರೂಪಾಂತರಿ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದ ವಸಂತಪುರ ವಾರ್ಡ್‌ನ ಒಂದೇ ಕುಟುಂಬದ ಮೂವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇವರ ಪ್ರಾಥಮಿಕ ಹಾಗೂ ಎರಡನೇ ಸಂಪರ್ಕದಲ್ಲಿರುವವರನ್ನು ಪತ್ತೆ ಮಾಡಿ, ಕ್ವಾರಂಟೈನ್ ಮಾಡುವ ಕಾರ್ಯ ನಡೆಯುತ್ತಿದೆ. 

ಬ್ರಿಟನ್ ರಿಟರ್ನ್ಡ್ : ಒಂದೇ ಕುಟುಂಬದ ಮೂವರಿಗೆ ಕೊರೊನಾ ಪಾಸಿಟಿವ್

'ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು' ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. 

Read More...