ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ವಿವಾದಗಳ ಬಗ್ಗೆ ಡಾ.ಮಹೇಶ್ ಜೋಷಿ ಖಡಕ್ ಮಾತು
ಡಾ.ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಲವಾರು ಕಾರಣಗಳಿಂದ ಚರ್ಚೆಯಾಗುತ್ತಿದೆ. ಆ ಬಗ್ಗೆ ಕ.ಸಾ.ಪ ಅಧ್ಯಕ್ಷರಾದ ಡಾ. ಮಹೇಶ್ ಜೋಷಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
ಬೆಂಗಳೂರು (ಜ.02): ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇದ್ದು, ಕನ್ನಡ ನುಡಿ ತೇರು ಎಳೆಯರು ಯಾಲಕ್ಕಿ ಕಂಪಿನ ನಗರಿ ಸಜ್ಜಾಗುತ್ತಿದೆ. ಜ. 6, 7 ಮತ್ತು 8ರಂದು ಹಾವೇರಿಯಲ್ಲಿ ‘86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ’ಕ್ಕೆ ದಿನಗಣನೆ ಶುರುವಾಗಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾಡಿನ ವಿವಿಧೆಡೆಯ ಸಾಹಿತ್ಯಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನು ಡಾ.ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಲವಾರು ಕಾರಣಗಳಿಂದ ಚರ್ಚೆಯಾಗುತ್ತಿದೆ. ಆ ಬಗ್ಗೆ ಕ.ಸಾ.ಪ ಅಧ್ಯಕ್ಷರಾದ ಡಾ. ಮಹೇಶ್ ಜೋಷಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.