Mysuru: ನಯನ ಕುಮಾರ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಮಾಡಿದ ನಟ ಡಾ.ಶಿವಣ್ಣ

ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗುವ ರೀತಿಯಲ್ಲಿ ಮೈಸೂರಿನಲ್ಲಿ ನಯನ ಕುಮಾರ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತಲೆ ಎತ್ತಿದೆ. 150 ಬೆಡ್‌ಗಳ ಸಾಮರ್ಥ್ಯ ಹೊಂದಿದ್ದು, ಕೈಗೆಟಕುವ ಬೆಲೆಯಲ್ಲಿ ಜನರಿಗೆ ಉತ್ತಮ ದರ್ಜೆಯ ವೈದ್ಯಕೀಯ ಸೌಲಭ್ಯ ನೀಡುವುದು ಇದರ ಗುರಿಯಾಗಿದೆ. 

First Published Jan 30, 2022, 1:10 PM IST | Last Updated Jan 30, 2022, 1:10 PM IST

ಬೆಂಗಳೂರು (ಜ. 30): ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗುವ ರೀತಿಯಲ್ಲಿ ಮೈಸೂರಿನಲ್ಲಿ ನಯನ ಕುಮಾರ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತಲೆ ಎತ್ತಿದೆ. 150 ಬೆಡ್‌ಗಳ ಸಾಮರ್ಥ್ಯ ಹೊಂದಿದ್ದು, ಕೈಗೆಟಕುವ ಬೆಲೆಯಲ್ಲಿ ಜನರಿಗೆ ಉತ್ತಮ ದರ್ಜೆಯ ವೈದ್ಯಕೀಯ ಸೌಲಭ್ಯ ನೀಡುವುದು ಇದರ ಗುರಿಯಾಗಿದೆ. ನಟ ಡಾ. ಶಿವರಾಜ್‌ಕುಮಾರ್ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದರು. 

ಗೀತಾ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಶಾಸಕ ಜಿ ಟಿ ದೇವೇಗೌಡ, ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ಧಾರೆ.  'ಇಂತಹ ಸುಸಜ್ಜಿತ ಆಸ್ಪತ್ರೆಗಳು ಹೆಚ್ಚಾಗಬೇಕು. ಈ ಆಸ್ಪತ್ರೆಯನ್ನ ಬಹಳ ಅಚ್ಚುಕಟ್ಟಾಗಿ ಕಟ್ಟಿದ್ದಾರೆ. ಎಲ್ಲದ್ದಕ್ಕು ಚಿಕಿತ್ಸೆ ಸೌಲಭ್ಯದ ವ್ಯವಸ್ಥೆ ಮಾಡಿದ್ದಾರೆ. ಕೋವಿಡ್‌ನ ಇಂತಹ ಸಂದರ್ಭಗಳಲ್ಲಿ ಆಸ್ಪತ್ರೆಗಳ ಮಹತ್ವ ಹೆಚ್ಚಿದೆ' ಎಂದು ಶಿವರಾಜ್‌ಕುಮಾರ್ ಹೇಳಿದರು.