ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕಾ? ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಪ್ರತಿಕ್ರಿಯೆ!

ಮುಡಾ ಪ್ರಕರಣ ಹೈಕೋರ್ಟ್ ತೀರ್ಪು ಕುರಿತು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಪ್ರತಿಕ್ರಿಯೆ, ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ, ಸಿದ್ದು ವಿರುದ್ದ ಸಿಬಿಐ ತನಿಕೆಗೆ ದೂರುದಾರರ ಆಗ್ರಹ, ಸಿಎಂ ಸಿದ್ದರಾಮಯ್ಯಗೆ ತನಿಖೆಗೆ ಬಿಸಿ, ಸಂಕಷ್ಟದಿಂದ ಹೊರಬರಲು ದಾರಿ ಹುಡುಕಾಟ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

First Published Sep 25, 2024, 11:45 PM IST | Last Updated Sep 25, 2024, 11:45 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದ ಬಳಿಕ ಇದೀಗ ಸಂಕಷ್ಟ ಹೆಚ್ಚಾಗಿದೆ. ಇದೀಗ ಇರುವ ಕಾನೂನು ದಾರಿಗಳನ್ನು ಹುಡುಕಾಟ ಜೋರಾಗಿದೆ.ಸಿದ್ದರಾಮಯ್ಯ ವಿರುದ್ದ ಹೈಕೋರ್ಟ್ ತನಿಖೆಗೆ ಅಸ್ತು ಎಂದಿದೆ. ಜನಪ್ರತಿನಿಧಿಗಳ ನ್ಯಾಯಾಲಯ, ಲೋಕಾಯುಕ್ತಕ್ಕೆ ಈ ಪ್ರಕರಣ ನೀಡಿದೆ. ಆದರೆ ದೂರುದಾರರಿಗೆ ಲೋಕಾಯುಕ್ತ ಮೇಲೆ ನಂಬಿಕೆ ಇಲ್ಲ ಅನ್ನೋ ಮಾತುಗಳು ಕೇಳಿಬಂದಿದೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ದ ಹೈಕೋರ್ಟ್ ನೀಡಿದ 171 ಪುಟಗಳ ತೀರ್ಪಿನಲ್ಲಿ ಏನಿದೆ? ಸಿದ್ದರಾಮಯ್ಯ ರಾಜೀನಾಮೆ ಕುರಿತು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಹೇಳಿದ್ದೇನು?