Asianet Suvarna News Asianet Suvarna News

ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿಗಳನ್ನು ತಡೆಯುವುದು ಈಗಿನ ದೊಡ್ಡ ಸವಾಲು: ರಾಜೀವ್ ಚಂದ್ರಶೇಖರ್

ಬೆಂಗಳೂರಿನಲ್ಲಿಂದು ಬಿಜೆಪಿ 'ಮಾಧ್ಯಮ ಮಂಥನ' ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಡಿಸಿಎಂ ಅಶ್ವಥ್ ನಾರಾಯಣ್, ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್ ಚಂದ್ರಶೇಖರ್ ಭಾಗಿಯಾಗಿದ್ದರು.

ಬೆಂಗಳೂರು (ಜ. 23): ರಾಜ್ಯ ರಾಜಧಾನಿಯಲ್ಲಿಂದು ಬಿಜೆಪಿ ಮಾಧ್ಯಮ ಮಂಥನ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಡಿಸಿಎಂ ಅಶ್ವಥ್ ನಾರಾಯಣ್, ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್ ಚಂದ್ರಶೇಖರ್ ಭಾಗಿಯಾಗಿದ್ದರು. 

ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

ಡಿಜಿಟಲ್ ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿಗಳನ್ನು ತಡೆಯುವುದು ಈಗಿನ ದೊಡ್ಡ ಸವಾಲು. ಇದನ್ನೇ ಮುಂದಿಟ್ಟುಕೊಂಡು ವಿರೋಧಿಗಳು ನಮ್ಮ ಮೇಲೆ ವಾಗ್ದಾಳಿ ನಡೆಸುತ್ತಾರೆ. 2014 ರವರೆಗೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಸುಳ್ಳು ಸುದ್ದಿಗಳಿಗೆ ಆಹಾರವಾಗಿದ್ದರು. ಸುಳ್ಳುಸುದ್ಧಿಗಳ ವಿರುದ್ಧ ಬಿಜೆಪಿ ಸತತವಾಗಿ ಧ್ವನಿ ಎತ್ತುತ್ತಲೇ ಬಂದಿದೆ. ಹಾಗಾಗಿ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆಯಾದರೂ, ಸಂಪೂರ್ಣವಾಗಿ ತಡೆಯುವುದು ದೊಡ್ಡ ಸವಾಲಾಗಿದೆ' ಎಂದು  ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್ ಚಂದ್ರಶೇಖರ್ ಹೇಳಿದರು.