ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ಬಿಸಿ; ಹೊರ ಬರುವಾಗ ಎಚ್ಚರ ವಹಿಸಿ

ಇಂದು ರಾಜ್ಯ ರಾಜಧಾನಿಯಲ್ಲಿ ಪ್ರೊಟೆಸ್ಟ್ ಡೇ. ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಯ ಬಿಸಿ ತಟ್ಟಲಿದೆ. 4 ಕಡೆಗಳಲ್ಲಿ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ. 

First Published Dec 9, 2020, 9:39 AM IST | Last Updated Dec 9, 2020, 9:39 AM IST

ಬೆಂಗಳೂರು (ಡಿ. 09): ಇಂದು ರಾಜ್ಯ ರಾಜಧಾನಿಯಲ್ಲಿ ಪ್ರೊಟೆಸ್ಟ್ ಡೇ.  ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಯ ಬಿಸಿ ತಟ್ಟಲಿದೆ. 4 ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮೌರ್ಯ ವೃತ್ತದಲ್ಲಿ ಧರಣಿ ನಡೆಯಲಿದೆ. 10 ಸಾವಿರಕ್ಕೂ ಹೆಚ್ಚು ರೈತರು ಸೇರುವ ಸಾಧ್ಯತೆ ಇದೆ. ಹಾಗಾಗಿ ಇಂದು ವಾಹನ ಸಂಚಾರ, ಕೆಲಸ ಕಾರ್ಯಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.