Asianet Suvarna News Asianet Suvarna News

Farmers Protest : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳಿಂದ ಹೆದ್ದಾರಿ ಬಂದ್

 ದೇಶದಲ್ಲಿ ಮೂರು ನೂತನ ಕೃಷಿ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ವಾಪಸ್ ಪಡೆದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರ ಹೋರಾಟ ಮುಂದುವರಿದಿದೆ. ದೇಶಾದ್ಯಂತ ಹೆದ್ದಾರಿ ಬಂದ್ ಮಾಡಲಾಗುತ್ತಿದೆ. ಕನಿಷ್ಟ ಬೆಂಬಲ ಬೆಲೆ ಕಾನೂನು ಜಾರಿ ಮಾಡಬೇಕು. ವಿದ್ಯುತ್ ಮಸೂದೇ 2020ನ್ನು ವಾಪಸ್ ಪಡೆಯಬೇಕು. ಕಾರ್ಮಿಕ ಕಾನೂನುಗಳನ್ನೂ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. 

ಬೆಂಗಳೂರು (ನ.26): ದೇಶದಲ್ಲಿ ಮೂರು ನೂತನ ಕೃಷಿ ಮಸೂದೆಯನ್ನು (Farm Laws) ಪ್ರಧಾನಿ ನರೇಂದ್ರ ಮೋದಿ (Prime minister Narendra modi) ವಾಪಸ್ ಪಡೆದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರ ಹೋರಾಟ ಮುಂದುವರಿದಿದೆ. ದೇಶಾದ್ಯಂತ ಹೆದ್ದಾರಿ ಬಂದ್ (highway bandh) ಮಾಡಲಾಗುತ್ತಿದೆ. ಕನಿಷ್ಟ ಬೆಂಬಲ ಬೆಲೆ ಕಾನೂನು ಜಾರಿ ಮಾಡಬೇಕು. ವಿದ್ಯುತ್ ಮಸೂದೇ 2020ನ್ನು ವಾಪಸ್ ಪಡೆಯಬೇಕು. ಕಾರ್ಮಿಕ ಕಾನೂನುಗಳನ್ನೂ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. 

Farm Laws Repeal: ಕೃಷಿ ಕಾಯ್ದೆ ಹಿಂಪಡೆದ ಬೆನ್ನಲ್ಲೇ ಆರ್ಟಿಕಲ್ 370 ಮರುಸ್ಥಾಪನೆಗೆ ಆಗ್ರಹ!

ಎಪಿಎಂಪಿ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ದೆಹಲಿಯಲ್ಲಿ  ರೈತ ಹೋರಾಟಕ್ಕೆ ಒಂದು ವರ್ಷ ಪೂರ್ತಿಯಾಗಿದ್ದು ಇಂದು ವಿವಿಧ  ರೈತ ಮುಖಂಡರ ನೇತೃತ್ವದಲ್ಲಿ ಹೆದ್ದಾರಿ ಬಂದ್ ಮಾಡಲಾಗುತ್ತಿದೆ.